ಬೆಂಗಳೂರು :ವಿಧಾನಸೌಧದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ಅಳವಡಿಸಿದ್ದಲ್ಲಿ ಆಗುವ ಅನುಕೂಲಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ರವರ ಬಳಿ ಚರ್ಚಿಸಿದರು.
ಮಾನ್ಯ ಸಚಿವರು ಹಂತ ಹಂತವಾಗಿ ತಂತ್ರಜ್ಞಾನವನ್ನು ಅಳವಡಿಸಬಹುದೆಂದು ಸಕಾರಾತ್ಮಕವಾಗಿ ಶಾಸಕರಿಗೆ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಸಂಪೂರ್ಣ ಸ್ವರಾಜ್ ಫೌಂಡೇಶನ ಮುಖ್ಯಸ್ಥರಾಗಿರುವ ಶಂಕರ್ ಪ್ರಸಾದ್ ರವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ