ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸನ್ಮಾನ ಮತ್ತು ಸಾರ್ಥಕ ಷಷ್ಠಿ ಕಾರ್ಯಕ್ರಮ

ಶಿವಮೊಗ್ಗ :ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಬರುವ ಜುಲೈ 28 ರ ಭಾನುವಾರ ಸಂಜೆ 4 ಗಂಟೆಗೆ ಕುವೆಂಪುರಂಗಮಂದಿರದಲ್ಲಿ ಅಭಿಮಾನದ ಸನ್ಮಾನ ಹಾಗೂ ಸಾರ್ಥಕ ಷಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಆರಂಭದಲ್ಲಿ ಭದ್ರಾವತಿ ಚಿಂತನ ಕಲಾವೃಂದದ ಹಾಡೋನಹಳ್ಳಿ ಸ್ವಾಮಿ ಮತ್ತು ತಂಡದವರಿಂದ ಎಂದೂ ಮರೆಯದ ಹಾಡುಗಳು ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

ಅಂದು ಸಂಜೆ 6:00ಗೆ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಮತ್ತು ಸಾಣೆಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ನಿಕಟಪೂರ್ವ ಶಾಸಕ ರುದ್ರೇಗೌಡ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಅಭಿಮಾನದ ಸನ್ಮಾನವನ್ನು ಆಯೋಜಿಸಲಾಗಿದೆ.
ಇದೇ ಸಂದರ್ಭದಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ಮೆಸ್ಕಾಂ ವೃತ್ತದ ಅಧೀಕ್ಷಕ ಅಭಿಯಂತರರಾದ ಎಸ್.ಜಿ.ಶಶಿಧರ್ ಅವರಿಗೆ ವಯೋನಿವೃತ್ತಿ ಪೂರ್ವ ಸನ್ಮಾನ “ಸಾರ್ಥಕ ಷಷ್ಠಿ” ಅನ್ನು ಹಮ್ಮಿಕೊಳ್ಳಲಾಗಿದೆ.
1991 ರಿಂದ ಇಲ್ಲಿವರೆಗೆ ವಿದ್ಯುತ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಶಶಿಧರ್ ಅವರು ಶಿವಮೊಗ್ಗದ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರಾಗಿ, ಅಧೀಕ್ಷಕ ಅಭಿಯಂತರವಾಗಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿರುವುದನ್ನು ಗಮನಿಸಿ ಈ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಅಂತೆಯೇ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡ ವೀರಶೈವ ವಿದ್ಯುತ್ ಇಲಾಖೆ ನೌಕರರ ಸಂಘ ಈಗಾಗಲೇ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿ ನೌಕರರ ಹಾಗೂ ಸಮಾಜದ ಸೇವಾವಾಣಿಯಾಗಿ ಕೆಲಸ ಮಾಡುತ್ತಿದೆ ಎಂಬುದು ಇಲ್ಲಿ ಸ್ಮರಣಾರ್ಹ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ