ಶಿವಮೊಗ್ಗ:೨೦೨೫ ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ, ವನ್ಯಮೃತ ಸಂರಕ್ಷಣೆ ಮುಂತಾದವುಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರು ಅರ್ಜಿ ಸಲ್ಲಿಸಬಹುದು.
ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ೨೦೨೫ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.
ಅದರಂತೆ ಮೇಲ್ಕಂಡ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ ಆಸಕ್ತ ಸಾಧಕರು ತಮ್ಮ
ಸ್ವ-ವಿವರದೊಂದಿಗೆ ತಮ್ಮ ಸಾಧನೆಯ ದಾಖಲೆಯನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಿದ್ದಪಡಿಸಿ ಜುಲೈ ೩೦ ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮಂದಿರ, ಸರ್.ಎಂ.ರಸ್ತೆ, ಶಿವಮೊಗ್ಗ, ದೂ.ಸಂ: ೦೮೧೮೨-೨೨೩೩೫೪ ಈ ಕಚೇರಿಗೆ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.