ಯಾದಗಿರಿ:2024-25ನೇ ಸಾಲಿನಲ್ಲಿ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖಾವತಿಯಿಂದ ಆಯ್ಕೆ ಪ್ರಕ್ತಿಯೆ ನಡೆಸಲು ತಿರ್ಮಾನಿಸಿದ್ದು ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿರುತ್ತದೆ.
ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಆನ್‌ಲೈನ್ sevasindhu.karnataka.gov.in, dom.karnataka.gov.in ನಲ್ಲಿ 2024ರ ಆಗಸ್ಟ್ 31ರ ಒಳಗೆ ಅರ್ಜಿಸಲ್ಲಿಸಬೇಕು. ಅರ್ಹತೆ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ), ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ, ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು ಎಂದು ಅವರು ತಿಳಿಸಿದ್ದಾರೆ.
ವರದಿ: ಶಿವರಾಜ ಸಾಹುಕಾರ್ ವಡಗೇರಾ