ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ:ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಜಿಲ್ಲಾಮಟ್ಟದ 2024-25 ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 49 ಘೋಷಿತ ಕೊಳಚೆ ಪ್ರದೇಶಗಳಿದ್ದು, ಅಲ್ಲಿ ಸುಮಾರು 50, 226 ಜನಸಂಖ್ಯೆ ವಾಸಿಸುತ್ತಿದ್ದು, ಇದರಲ್ಲಿ ಅಲ್ಪಸಂಖ್ಯಾತರ 1081 ಕುಟುಂಬಗಳಿದ್ದು ಸುಮಾರು 6445 ಅಲ್ಪಸಂಖ್ಯಾತ ಜನರು ವಾಸಿಸುತ್ತಿದ್ದಾರೆ. ಇವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಜಿಲ್ಲಾ ಪಂಚಾಯಿತಿ, ಕೈಗಾರಿಕೆ, ಕೌಶಲ್ಯಾಭಿವೃದ್ಧಿ ಮತ್ತಿತರ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸಿ, ಪ್ರಗತಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸೂಚಿಸಿದರು.

ಶೈಕ್ಷಣಿಕ ಸೌಲಭ್ಯಗಳು, ಮೂಲ ಸೌಕರ್ಯಕ್ಕೆ ಒತ್ತು ನೀಡುವುದು, ವಿದ್ಯಾರ್ಥಿ ವೇತನ, ಸ್ವ ಉದ್ಯೋಗಕ್ಕೆ ಒತ್ತು, ಸಾಲ ಸೌಲಭ್ಯ, ವಸತಿ ಯೋಜನೆ ಸೇರಿದಂತೆ ಎಲ್ಲಾ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾಧ್ಯವಾದಷ್ಟು ಆರ್ಥಿಕ ಮತ್ತು ಭೌತಿಕ ಗುರಿಗಳಿಗೆ ಅನುಗುಣವಾಗಿ ಶೇ 15 ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಪಿಓ ಗುರುನಾಥ ಗೌಡಪ್ಪನ್ನೋರ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಕೆ ಪ್ರವೀಣಕುಮಾರ, ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ, ಕೌಶಲ್ಯಾಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ನಗರಸಭೆಯ ಕಾರ್ಯಪಾಲಕ ಅಭಿಯಂತರ ರಜನಿಕಾಂತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ