ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯಾದಗಿರಿ ಪಿಎಸ್ಐ ಸಾವಿನ ಸುತ್ತ ಅನುಮಾನದ ಹುತ್ತ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಮೇಲೆ ನೊಂದ ಕುಟುಂಬ ಗಂಭೀರ ಆರೋಪ ಮಾಡಿದೆ. ಪೋಸ್ಟಿಂಗ್​ಗಾಗಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಮಾಡಿದೆ. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ