ಬೆಂಗಳೂರು :ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ವಿವಿಧ ಪ್ರದೇಶ ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಹಾರ ಕೋರಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಕೂಡದು. ಕೂಡಲೇ ಅಗತ್ಯ ಪರಿಹಾರ ಒದಗಿಸಬೇಕು. ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿದ್ದುಕೊಂಡು ಮಾಹಿತಿ ನೀಡಲು ಸೂಚಿಸಿದ್ದಾರೆ. ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿನ ಕೆಳಹಂತದ ಸೇತುವೆಯನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದಾರೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ