ಯಾದಗಿರಿ:ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಪತ್ತು ನಿರ್ವಹಣಾ ಕೋಶದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಭರ್ತಿ ನೇಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿ ಕಛೇರಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಜಿಲ್ಲೆಗೆ ವಿಪತ್ತು ನಿರ್ವಹಣೆಯಲ್ಲಿ ನೈಪುಣ್ಯತೆ ಹೊಂದಿದವರನ್ನು ಮಾಸಿಕ 48,400 ರೂ.ಗಳ ಸಂಭಾವನೆಯೊಂದಿಗೆ District Disaster Professional ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿ 2024ರ ಆಗಸ್ಟ್ 21ರ ಅಪರಾಹ್ನ 1 ಗಂಟೆಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ವರದಿ: ಶಿವರಾಜ ಸಾಹುಕಾರ್ ವಡಗೇರಾ