ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಬಸ್ ಚಾಲಕನ ಅತಿವೇಗದಿಂದ ಗರ್ಭಿಣಿ ಮಹಿಳೆ ಸಾವು

ಚಾಮರಾಜನಗರ:ಕೆ ಎಸ್ ಆರ್ ಟಿ ಸಿ ಬಸ್ ಅತೀ ವೇಗಕ್ಕೆ ರಸ್ತೆ ದಾಟುತ್ತಿದ್ದ ಗರ್ಭಿಣಿ ಯುವತಿ ಸಿಲುಕಿ ದಾರುಣ ಸಾವು ರೊಚ್ಚಿಗೆದ್ದ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ

ನಿನ್ನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ಹೋಲಿಕ್ರಾಸ್ ಆಸ್ಪತ್ರೆ ಮುಂಭಾಗ ಬಸ್ ನಿಲ್ದಾಣದಲ್ಲಿ ಆಸ್ಪತ್ರೆಯಿಂದ ರಸ್ತೆ ದಾಟುತಿದ್ದ ಅಜ್ಜಿಪುರ ಗ್ರಾಮದ 22 ವರ್ಷದ ನಮಿತಾ ಅತಿ ವೇಗದಿಂದ ಬರುತ್ತಿದ್ದ ಸಾರಿಗೆ ವಾಹನಕ್ಕೆ ಸಿಲುಕಿ ಮೃತ ಪಟ್ಟಿದ್ದಾರೆ.

ನಮಿತಾ ರವರು ಮೂಲತಃ ಪಿಜಿ ಪಾಳ್ಯಗ್ರಾಮದವರಾಗಿದ್ದು ಎರಡು ತಿಂಗಳ ಗರ್ಭಿಣಿಯಾಗಿದ್ದು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ವೈದ್ಯಕೀಯ ತಪಾಷಣೆಗಾಗಿ ಬಂದಿದ್ದರು ಎನ್ನಲಾಗಿದೆ.

ತಮ್ಮ ಗ್ರಾಮಕ್ಕೆ ತೆರಳಲು ರಸ್ತೆ ದಾಟುವಾಗ ಈ ದಾರುಣ ಘಟನೆ ನಡೆದಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯ ಗ್ರಾಮಸ್ಥರು ಹಾಗು ಮೃತ ಯುವತಿಯ ಸಂಬಧಿಕರು ರಸ್ತೆ ತಡೆ ನಡೆಸಿ ಸಾರಿಗೆ ಇಲಾಖೆ ವಿರುದ್ಧ ಬಾರಿ ಅಕ್ರೋಶ ವ್ಯಕ್ತಪಡಿಸಿ ಸಾರಿಗೆ ಬಸ್ ಚಾಲಕರು ನಿಧಾನವಿಲ್ಲದೆ ಯರ್ರಾ ಬಿರ್ರಿ ಗಾಡಿ ಚಲಾಯಿಸುತ್ತಾರೆ.ಕಾಮಗೆರೆ ಗ್ರಾಮದಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಅಪಘಾತದಿಂದ ಸಾವನಪ್ಪಿರುವುದು ಇದು ಮೂರನೇ ಘಟನೆ ಹಲವಾರು ಸಣ್ಣ ಪುಟ್ಟ ಅಪಘಾತಗಳು ಆಗುತ್ತಿದ್ದೂ ಬ್ಯಾರಿಕೆಡ್ ಅಳವಡಿಸುವಂತೆ ನಾಲ್ಕು ತಿಂಗಳ ಹಿಂದೆ ಪೊಲೀಸ್ ಇಲಾಖೆಗೆ ಹಾಗೂ ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದೆವು ಆದರೂ ಕೂಡಾ ಎಚ್ಚೆತ್ತುಕೊಂಡಿಲ್ಲ ಇಂತಹ ಅಪಘಾತಗಳು ಪುನಹ ಸಂಭವಿಸದೆ ಇರಲಿ ಎಂಬ ಉದ್ದೇಶದಿಂದ ಈ ರಸ್ತೆಯಲ್ಲಿ ರಸ್ತೆ ಡುಬ್ಬ ಅಥವಾ ಬ್ಯಾರಿಕೆಡ್ ಹಾಕುವ ಮೂಲಕ ವಾಹನಗಳಿಗೆ ವೇಗ ನಿಯಂತ್ರಣ ಮಾಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಸಂಬಂದಿಕರ ಆಕ್ರಂದನವಂತೂ ಮುಗಿಲು ಮುಟ್ಟಿತು,

ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಶಂಕರ್ ಘಟನ ಸ್ಥಳಕ್ಕೆ ಆಗಮಿಸಿ ಯುವತಿಯ ಸಾವಿಗೆ ಸಂತಾಪ ಸೂಚಿಸಿ ಪರಿಹಾರದ ಹಣವಾಗಿ 25 ಸಾವಿರ ಅoತ್ಯ ಸಂಸ್ಕಾರದ ಖರ್ಚು ನೀಡುವ ಆದೇಶವಿದೆ ನಂತರ ಚಾರ್ಜ್ ಶೀಟ್ ಆದ ಬಳಿಕ 25 ಸಾವಿರ ನೀಡಲಾಗುವುದು ,ಅನಂತರ ಕೋರ್ಟ್ ಮೂಲಕ ಕುಟುಂಬಸ್ಥರಿಗೆ ಪರಿಹಾರದ ಹಣ ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.

ಕೊಳ್ಳೇಗಾಲ ಮತ್ತು ಹನೂರು ತಾಲೂಕಿನ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ಮಾಡುತ್ತಿದ್ದವರ ಮನವೊಲಿಸಿದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!