ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸುವುದು ಮತ್ತು ಕಲ್ಯಾಣ ಕರ್ನಾಟಕ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ:ಅಮರೇಗೌಡ ಮಲ್ಲಾಪೂರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಕಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಪರಿಸರ ರಕ್ಷಕರು, ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ 36ನೇ ಹುಟ್ಟು ಹಬ್ಬ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು 36 ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ವಹಿಸಿದ್ದರು ಹಾಗೂ ಶ್ರೀ ಮತಿ ರಾಜೇಶ್ವರಿ ವಿಜ್ಞಾನ ಶಿಕ್ಷಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಮರೇಗೌಡ ಮಲ್ಲಾಪೂರ ಮಾತನಾಡಿ ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸುವುದು ಮತ್ತು ಕಲ್ಯಾಣ ಕರ್ನಾಟಕ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ.ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಗಿಡಮರಗಳ ಉಳಿವಿಗಾಗಿ ಪಣತೊಡಬೇಕು ಎಂದರು.

ಈ ಸಂದರ್ಭದಲ್ಲಿ ಅಮರೇಗೌಡ ಮಲ್ಲಾಪೂರ,ಶಂಕರಗೌಡ ಎಲೆಕೂಡ್ಲಿಗಿ,ಗಿರಿಸ್ವಾಮಿ ಹೆಡಗಿನಾಳ,ಚನ್ನಪ್ಪ ಕೆ.ಹೊಸಹಳ್ಳಿ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ,SDMC ಅಧ್ಯಕ್ಷ ಅಂಬಣ್ಣ ದೇವರಮನಿ, ಕೆ.ಮುಖ್ಯೋಪಾಧ್ಯಾಯರು, ಶಿಕ್ಷಕರಾದ ಮಲ್ಲಿಕಾರ್ಜುನಯ್ಯ ಸ್ವಾಮಿ,ರಾಜೇಶ್ವರಿ,ವೆಂಕೋಬ,ಶೈನಾಜ್ ಬೇಗಂ, ರಾಜಶೇಖರಗೌಡ, ನಾಗರಾಜ,ವೀರೇಶ,ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!