ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಂಡಿಹಾಳ ಗ್ರಾಮದಲ್ಲಿ ಸಂಭ್ರಮದಿಂದ ನಾಗರ ಪಂಚಮಿ ಆಚರಣೆ

“ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ಹಬ್ಬ “

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಬಂಡಿಹಾಳ ಗ್ರಾಮದಲ್ಲಿ ಸೋದರಿಯರು, ಮುದ್ದು ಮಕ್ಕಳು, ನಾಗದೇವತೆಗೆ “ನಮ್ ಪಾಲ್ ನಿಮ್ ಪಾಲ್ ಸರಿ ಪಾಲ್” ಹೇಳುವುದರ ಮೂಲಕ ನಾಗದೇವತೆಗೆ ಹಾಲನ್ನು ಹಾಕಿ ನಾಗರ ಪಂಚಮಿಯನ್ನು ಆಚರಣೆ ಮಾಡಲಾಯಿತು.

ನಾಗರ ಪಂಚಮಿ ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬ ನಾಗರ ಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ.

“ಪಂಚಮಿ ಹಬ್ಬ ಬಂತವ್ವ ಸನಿಯಾಕ,ನಮ್ಮಣ್ಣ ಬರಲಿಲ್ಲ ಇನ್ನೂ ಕರಿಯಾಕ, ಕರಿ ಸೀರೆ ಉಡುಸಾಕ, “ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣು ಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಗಳ ನಂತರ ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ, ಹೀಗೆ ಹಬ್ಬಗಳು ಒಂದರ ಮೇಲೊಂದು ಆಚರಣೆಗಳು ಆರಂಭವಾಗುತ್ತವೆ.

ವರದಿ:ಬಸವರಾಜ ಕೆ ಕಳಸಪ್ಪನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!