ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರೋಟರಿ ಕ್ಲಬ್ ನಿಂದ ಉಚಿತ ಪುಸ್ತಕ ವಿತರಣೆ

ಶಿವಮೊಗ್ಗ: ಹೆಚ್ಚು ಪ್ರತಿಭಾವಂತರು ಹೊರಹೊಮ್ಮಿರುವುದು ಸರಕಾರಿ ಶಾಲೆಗಳಿಂದಲೇ ಆದ್ದರಿಂದ ಸರಕಾರಿ ಶಾಲೆ, ಕಾಲೇಜು ಎಂಬ ಕೀಳರಿಮೆಯನ್ನು ಬಿಟ್ಟು ಅಧ್ಯಯನದ ಕಡೆಗೆ ಹೆಚ್ಚಿನ ಗಮನ ನೀಡಿದರೆ ಸಾಧನೆ ಮಾಡಲು ಎಲ್ಲರಿಂದಲೂ ಸಾಧ್ಯ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷೆ ರೋ.ರೂಪಾಪುಣ್ಯಕೋಟಿ ಅಭಿಪ್ರಾಯಪಟ್ಟರು.
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ೮ ಸೇವಾ ಕಾರ್ಯಕ್ರಮಗಳಲ್ಲಿ ಒಂದಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿ ಮಾತನಾಡಿದರು.
ದೇಶದಲ್ಲಿ ಸಾಧನೆಗೈದ ಹಿರಿಯರೆಲ್ಲರೂ ಸರಕಾರಿ ಶಾಲೆಗಳಲ್ಲಿಯೇ ಕಲಿತರು ಎಂಬುದನ್ನು ಯಾರೂ ಮರೆಯಬಾರದು. ಸರಕಾರದಿಂದಲೂ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿ ಕಲಿಯುವ ವಾತವರಣವನ್ನು ಸ್ಪಷ್ಟಿ ಮಾಡಲಾಗಿದೆ. ಅದನ್ನು ನಾವು ಸಮರ್ಥವಾಗಿ ಸದುಪಯೋಗ ಮಾಡಿಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಚೆನ್ನಾಗಿ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ವಿಜ್ಞಾನ ವಿಭಾಗದಲ್ಲಿ ಸರಕಾರಿ ಶಾಲೆಯ ಉಪನ್ಯಾಸಕರು ಅತ್ಯಂತ ಸಮರ್ಥವಾಗಿ ಪಾಠ ಪ್ರವಚನಗಳನ್ನು ಮಾಡುತ್ತಾರೆ. ನಗರದಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರು ಇದ್ದಾರೆ. ಆದರೆ, ಅವರ ಜ್ಞಾನದ ಸದುಪಯೋಗ ಪಡೆಯಲು ಮಕ್ಕಳು ಮುಂದಾಗಬೇಕು. ಯಾವುದೇ ಉಪನ್ಯಾಸಕರ ಸಮರ್ಥ ಜ್ಞಾನವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡರೆ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಲಬ್‌ನ ಮಾಜಿ ಅಧ್ಯಕ್ಷ ರೋ.ಎಸ್.ಆರ್.ಲಕ್ಷ್ಮೀನಾರಾಯಣ ಮಾತನಾಡಿ, ವಿದ್ಯಾರ್ಥಿಗಳ ಅಧ್ಯಯನ ಆಸಕ್ತಿಯನ್ನು ಇನ್ನಷ್ಟು ಹುರುದುಂಬಿಸಲು ರೋಟರಿ ಉಚಿತ ಪುಸ್ತಕ ವಿತರಣೆ ಮಾಡಿದೆ. ಮುಂದಿನ ದಿನಗಳಲ್ಲಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಇನ್ನಷ್ಟು ಅಗತ್ಯ ಸೌಲಭ್ಯ ನೀಡಲು ರೋಟರಿ ಕ್ಲಬ್ ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಎಸ್.ಜಯಂತ್ ಅವರು ಮಾತನಾಡಿ, ರೋಟರಿ ಸಂಸ್ಥೆಗಳು ಸರಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಿವೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ನೀಡುತ್ತಿದ್ದಾರೆ. ಇದನ್ನು ವಿದ್ಯಾರ್ಥಿನಿಯರು ಉಪಯೋಗಿಸಿಕೊಂಡು ಉತ್ತಮ ಫಲಿತಾಂಶ ತರಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೋ.ಡಾ.ಪ್ರಕೃತಿ, ರೋ.ಭಾರದ್ವಾಜ್, ರೋ.ಸತ್ಯನಾರಾಯಣ್, ರೋ.ವಾಗೀಶ್, ರೋ.ಸತೀಶ ಹಾಗೂ ಇತರರು ಹಾಜರಿದ್ದರು.
ಒಂದೇ ದಿನ ಎಂಟು ಸೇವಾ ಯೋಜನೆಗಳು
ಆಗಸ್ಟ್ ಎಂಟರಂದು ಎಂಟು ಸೇವಾ ಯೋಜನಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದ ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷರಾದ ರೋ.ರೂಪಾ ಪುಣ್ಯಕೋಟಿ ಅವರು, ಸದಸ್ಯರ ಸಹಕಾರದೊಂದಿಗೆ ಬೆಳಗ್ಗೆ ರೋಟರಿ ಬಯೋಡೈವರ್ಸಿಟಿಯಲ್ಲಿ ವನಮಹೋತ್ಸವ ಕಾರ್ಯಕ್ರಮದ ಮೂಲಕ ತಮ್ಮ ಸೇವಾ ಯೋಜನೆ ಆರಂಭ ಮಾಡಿದರು.
ಅನಂತರದಲ್ಲಿ ಮೆಗ್ಗಾನ ಆಸ್ಪತ್ರೆಯಲ್ಲಿ ೧೦ ಬಾಣಂತಿಯರ ಮಗುವಿಗೆ ಹೊದಿಕೆಯನ್ನು ತಮ್ಮ ಕಾರ್ಯದರ್ಶಿ ರೋ.ಪ್ರಕೃತಿ ಅವರೊಂದಿಗೆ ವಿತರಣೆ ಮಾಡಿ, ಗುಡಲಕ್ ಆರೈಕೆ ಕೇಂದ್ರದಲ್ಲಿ ಹಿರಿಯರಿಗೆ ಪೌಷ್ಠಿಕಾಂಶ ಉಳ್ಳ ಆಹಾರದ ಪ್ಯಾಕ್‌ಗಳನ್ನು ವತರಣೆ ಮಾಡಿದರು. ಅನಂತರ ಕಾಶಿಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮದ್ಯಾಹ್ನ ಬಿಸಿಯೂಟಕ್ಕೆ ಅನುಕೂಲವಾಗುವಂತೆ ಸಿಹಿ ಪದಾರ್ಥ ತಯಾರು ಮಾಡುವ ವಸ್ತುಗಳನ್ನು ನೀಡಿದರಲ್ಲದೆ, ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಲು ಅರಿವು ಕಾರ್ಯಕ್ರಮ ನಡೆಸಿ ಬಟ್ಟೆ ಬ್ಯಾಗಗಳ ಬಳಕೆಯ ಬಗ್ಗೆ ಮನವರಿಕೆ ಮಾಡಿದರು. ಅನಂತರದಲ್ಲಿ ಚೇತನ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ ಮತ್ತು ಗಂಗೋತ್ರಿ ಕಾಲೇಜು ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಚತಾ ಕಾರ್ಯಕ್ರಮ ನಡೆಸುವ ಮೂಲಕ ಎಂಟು ಯಶಸ್ವಿ ಸೇವಾ ಯೋಜನೆ ಮುಗಿಸಿದರು.
ಈ ಸಂದರ್ಭದಲ್ಲಿ ಕ್ಲಬ್‌ನ ಹಿರಿಯ ಸದಸ್ಯರಾದ ರೋ.ಭಾರದ್ವಾಜ್,ರೋ.ಎಸ್.ಆರ್.ಲಕ್ಷ್ಮೀನಾರಾಯಣ್, ರೋ.ಎಸ್.ಎಸ್.ವಾಗೀಶ, ರೋ.ಸತ್ಯನಾರಾಯಣ್, ರೋ.ಡಾ.ಪ್ರಕೃತಿ, ರೋ.ರೇಣುಕಾರಾಧ್ಯ ಹಾಗೂ ಇತರರು ಹಾಜರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ