ಆರೋಪಿಗಳನ್ನು ಪತ್ತೆ ಹಚ್ಚಲು ಡಾ.ಎಂ ಬಿ ಹಡಪದ ಸುಗೂರ ಎನ್ ಸರ್ಕಾರಕ್ಕೆ ಆಗ್ರಹ
ಕಲಬುರಗಿ:ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ (54) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹಡಪದ ಅವರು ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿತ್ತಿದ್ದರು.
ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.ಸಾವಿನ ಕುರಿತು ಕುಟುಂಬದವರು ಸಹ ಸಂಶಯ ವ್ಯಕ್ತಪಡಿಸಿದ್ದಾರೆ,ಶಿಕ್ಷಕರು ಯಾರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂಬುದು ಸುದ್ದಿ ಕೇಳಿ ಬಂದಿದೆ.? ತಪ್ಪಿತಸ್ಥ ರು ಯಾರೇ ಇರಲಿ ಅವರಿಗೆ ಶಿಕ್ಷೆ ಆಗಲೇಬೇಕು.?
ಸರ್ಕಾರಿ ನೌಕರರ ಸಂಘದಿಂದಲೂ ಮತ್ತು ರಾಜ್ಯದ ಸಮಸ್ತ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಈ ಸಾವಿನ ಕುರಿತು ಸಂಶಯ ವ್ಯಕ್ತವಾಗಿದೆ.
ಈ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಒತ್ತಾಯಿಸಿದ್ದಾರೆ ಮತ್ತು ಈ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಂಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.?
ಸ್ಥಳಕ್ಕೆ ಬಸವನಬಾಗೇವಾಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೋಲಿಸರು ತನಿಖೆ ಬಳಿಕ ಸತ್ಯಾಂಶ ಹೊರ ಬರಲಿದೆ. ಹಾಗೆಯೇ ಶಿಕ್ಷಣ ಇಲಾಖೆಯ ಅಡಿಯಲ್ಲಿ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರು ಹೆಚ್ಚಿನ ತನಿಖೆಗಾಗಿ ಸೂಕ್ತ ರೀತಿಯಲ್ಲಿ ಕ್ರಮ ತೆಗೆದುಕೊಂಡು ಸತ್ಯಾಂಶವನ್ನು ಹೊರಗೆ ತರಲು ಆರೋಪಿಗಳಿನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆ ವಿಧಿಸಲೇಬೇಕು. ಮತ್ತು ಹೆಚ್ಚಿನ ತನಿಖೆಗಾಗಿ ಸಿಬಿಐ ಅಥವಾ ಸಿಐಡಿ (ಎಸ್.ಐ.ಟಿ) ಗೆ ವಹಿಸಿ ಸರ್ಕಾರ ತಪ್ಪಿತಸ್ಥರು ಯಾರೇ ಪ್ರಭಾವಿ ಆಗಿದ್ದರು. ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು.? ಮತ್ತು
ಶಿಕ್ಷಕನ ದಾರುಣ ಸಾವಿನಿಂದ ನೊಂದ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಲು ಕೊಡಬೇಕೆಂದು ಮತ್ತು ಈ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕು, ಮತ್ತು ಶಿಕ್ಷಕರ ಕುಟುಂಬಕ್ಕೆ ಪರಿಹಾರ ಧನ ಸಹಾಯ ಸರ್ಕಾರದ ನೀಡಬೇಕು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಸರ್ಕಾರಕ್ಕೆ ಮತ್ತು ಶಿಕ್ಷಣ ಇಲಾಖೆಯ ಸಚಿವರಿಗೆ ಹಾಗೂ ಗೃಹ ಸಚಿವರಿಗೆ ಮನವಿ ಮಾಡಿ ಒತ್ತಡವನ್ನು ಹಾಕಲಾಗುತ್ತದೆ.ಈ ಸಾವಿಗೆ ನ್ಯಾಯ ಸಿಗಲಿ…