ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೂಡಿ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ರವರು ಗುರುವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವಿಕ್ಷಣೆ ಮಾಡಿದರು. ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ನದಿ ಕಡೆ ಮತ್ತು ನದಿ ದಡದ ಕಡೆಗೆ ಯಾರು ಹೋಗಬಾರದು,ತಮ್ಮ ಜಾನುವಾರುಗಳನ್ನು ಕೂಡಾ ಬಿಡಬಾರದು,ಪ್ರವಾಹ ಹೆಚ್ಚಾಗುವ ಸಂಭವವಿದ್ದಲ್ಲಿ ಎತ್ತರದ ಪ್ರದೇಶಗಳ ಕಡೆ ಕಾಳಜಿ ಕೇಂದ್ರಕ್ಕೆ ಹೋಗಬೇಕೆಂದು ತಿಳಿಸಿದರು.
ಸ್ಥಳದಲ್ಲಿದ್ದ ಸಂಭಂದ ಪಟ್ಟ ಅಧಿಕಾರಿಗಳಿಗೆ ಕ್ಷಣ – ಕ್ಷಣದ ನೀರಿನ ಒಳ ಮತ್ತು ಹೊರ ಹರಿವಿನ ಪ್ರಮಾಣದ ಕುರಿತು ವರದಿ ನೀಡಲು ಸೂಚಿಸಿದರು. ನಂತರ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ನೋಡಲ್ ಅಧಿಕಾರಿ ಸಂತೋಷ ಇನಾಮದಾರ ಸೇರಿದಂತೆ ಅಧಿಕಾರಿಗಳು, ತಾಲೂಕುಮಟ್ಟದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್(ಜೇವರ್ಗಿ)