ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅನಿರೀಕ್ಷಿತ ಬಾಲಕಾರ್ಮಿಕ ತಪಾಸಣೆ ಕಾರ್ಯಾಚರಣೆ

ಶಿವಮೊಗ್ಗ : ಆ.06 ರಂದು ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಅನಿರೀಕ್ಷಿತ ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಶಿವಮೊಗ್ಗ ನಗರದ ಬೈಪಾಸ್ ರಸ್ತೆ, ನ್ಯೂಮಂಡ್ಲಿ ಹಾಗೂ ಎನ್.ಟಿ ರಸ್ತೆಗಳಲ್ಲಿನ ಗ್ಯಾರೇಜ್, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.

ಈ ತಪಾಸಣೆಯಲ್ಲಿ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಹಾಗೂ ನೇಮಿಸಿಕೊಂಡ ಮಾಲೀಕರ ವಿರುದ್ಧ ರೂ.20,000/- ರಿಂದ ರೂ.50,000/-ಗಳವರೆಗೆ ದಂಡವನ್ನು ಅಥವಾ 6 ತಿಂಗಳಿನಿಂದ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಅರಿವು ಮೂಡಿಸಲಾಯಿತು.
ಕಾರ್ಯಚರಣೆಯಲ್ಲಿ ಎಂ.ಕೃಷ್ಣ ಕಾರ್ಮಿಕ ನಿರೀಕ್ಷಕರು-01ನೇ ವೃತ್ತ, ಕಾರ್ಮಿಕ ಇಲಾಖೆ ಶಿವಮೊಗ್ಗ, ರಘುನಾಥ ಎ.ಎಸ್ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ