ಕಲಬುರಗಿ:ಅಂತಾರಾಷ್ಟ್ರೀಯ ಕುಸ್ತಿ ಪಟು ವಿನೇಶಾ ಪೋಗಟ್ ಅವರಿಗೆ ಒಲಿಪಿಂಕ್ಸ್ ಕುಸ್ತಿ ಫೈನಲ್ ಪಂದ್ಯದ ಮೊದಲು ಅವರ ತೂಕ ಕೇವಲ 100 ಗ್ರಾಂ ಹೆಚ್ಚಳವಾಗಿದೆ ಎಂದು ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ಗೇಮ್ ನ ಕಾನೂನು ಪುನರ್ ವಿಮರ್ಶೆ ಮಾಡುವುದು ಅಗತ್ಯವಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಮತ್ತು ಸಾಮಾಜಿಕ ಕಾರ್ಯಕರ್ತರಾದ ಡಾ.ಮಲ್ಲಿಕಾರ್ಜುನ ಬಿ ಹಡಪದ. ಸುಗೂರ ಎನ್ ಜಿ ಯವರು ಹೇಳಿದರು.
ಸಾಮಾನ್ಯವಾಗಿ ಯಾವುದಾದರೂ ಆಟದ ಆರಂಭದಲ್ಲಿ ತೂಕ ಮತ್ತು ಇತರ ಅರ್ಹತೆಗಳನ್ನು ನೋಡುತ್ತಾರೆ. ಆದರೆ, ಪ್ರತಿಯೊಂದು ರೌಂಡ್ ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ.ಈ ಒಲಿಂಪಿಕ್ಸ್ ನಲ್ಲಿ ತೂಕ ನೋಡಿರುವುದು ಪ್ರಶ್ನಾರ್ಹವಾಗಿದೆ. ಪ್ರತಿ ದಿನ ವ್ಯಕ್ತಿಯ ತೂಕದಲ್ಲಿ ನೂರರಿಂದ ಮುನ್ನೂರು ಗ್ರಾಂ ವ್ಯತ್ಯಾಸವಾಗುತ್ತಿರುತ್ತದೆ. ಅವರ ತೂಕದಲ್ಲಿ ನೂರು ಗ್ರಾಂ ಹೆಚ್ಚಾಗಿದೆ ಎಂದು ಸ್ಪರ್ಧೆಯಿಂದ ಅಮಾನತು ಮಾಡುವುದು ಸಮಂಜಸ ಅಲ್ಲ. ಪ್ರತಿದಿನ ಮನುಷ್ಯನ ದೇಹದ ತೂಕದಲ್ಲಿ ಹೆಚ್ಚಾಗುವುದು ಕಡಿಮೆಯಾಗುವುದು ತನ್ನದೇ ಆದ ನೈಸರ್ಗಿಕ ಮೆಟಾಬಲಿಕ್ ಪ್ರಕ್ರಿಯೆ. ಮೆಟಾಬೆಲಿಕ್ ಚಟುವಟಿಕೆಗಳು ಕಡಿಮೆ ಆದಾಗ ತೂಕ ಹೆಚ್ಚಾಗುತ್ತದೆ. ಮೆಟಾಬೆಲಿಕ್ ಚಟುವಟಿಕೆಗಳು ಹೆಚ್ಚಾದಾಗ ತೂಕ ಕಡಿಮೆ ಆಗುತ್ತದೆ. ಇದು ನೈಸರ್ಗಿಕ ಕ್ರಿಯೆ. ಹೀಗಾಗಿ ತೂಕ ಹೆಚ್ಚಳದ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದಿರುವುದು ಬಹಳ ದೊಡ್ಡ ಅನ್ಯಾಯವಾದಂತಾಗಿದ್ದು ಇದನ್ನು ಪುನರ್ ಪರಿಶೀಲನೆ ಮಾಡುವುದು ಅಗತ್ಯ ಎಂದು ಅವರು ಆಗ್ರಹಿಸಿದರು.ಒಲಿಂಪಿಕ್ಸ್ ಕ್ರೀಡಾ ಕೂಟ ಕ್ಲೀನ್ ಅಂತ ಏನಿಲ್ಲ ಅಲ್ಲಿಯೂ ಕೂಡ ಕೆಲವು ಸಾರಿ ರಾಜಕೀಯ ನಡೆಯುತ್ತದೆ. ಕೆಲವರನ್ನು ಹೊರಗಿಡುವ ತಂತ್ರಗಾರಿಕೆ ನಡೆಯುತ್ತದೆ. ಆ ಹಿನ್ನೆಲೆಯಲ್ಲಿ ಕೆಲವರಿಗೆ ಶಿಕ್ಷೆ ಕೂಡಾ ಆಗಿದೆ. ಈ ಪ್ರಕರಣವನ್ನು ಕೇಂದ್ರ ಕ್ರೀಡಾ ಸಚಿವರು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಬೋರ್ಡ್ ಗೆ ತೆಗೆದುಕೊಂಡು ಹೋಗಬೇಕು ಮತ್ತು ಯಾವುದೇ ಕಾರಣಕ್ಕೂ ವಿನೇಶಾ ಪೋಗಟ್ ಕುಸ್ತಿ ಫೈನಲ್ ಆಡುವುದರಿಂದ ವಂಚಿತರಾಗಬಾರದು. ಅವರಿಗೆ ಅವಕಾಶ ದೊರಕುವಂತೆ ನೋಡಿಕೊಳ್ಳಬೇಕು. ಇದು ಎಲ್ಲಾ ಭಾರತೀಯರ ಕೋರಿಕೆ ಎಂದು ಹೇಳಿದರು.
ಕಳೆದ ಬಾರಿಯೂ ವಿನೇಶಾ ಪೋಗಟ್ ಸ್ಪರ್ಧೆಯಿಂದ ದೂರ ಉಳಿಯುವಂತಾಗಿತ್ತು. ಈ ಬಾರಿಯಂತೂ ದೊಡ್ಡ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳು ನಡೆಯಬೇಕು. ಅವರಿಗೆ ಅವಕಾಶ ದೊರೆಯಬೇಕು. ಅವರಿಗೆ ಫೈನಲ್ ನಲ್ಲಿ ಅವಕಾಶ ದೊರೆತರೆ ಚಿನ್ನದ ಪದಕ ಗೆಲ್ಲುವ ವಿಶ್ವಾಸ ಇದೆ. ಒಲಿಂಪಿಕ್ಸ್ ನಲ್ಲಿ ವಿನೇಶಾ ಪೋಗಟ್ ಚಿನ್ನದ ಪದಕ ತರುತ್ತಾರೆ ಎನ್ನುವ ವಿಶ್ವಾಸ ಈ ಭಾರತೀಯ ದೇಶದ ಪ್ರಜೆಗಳ ವಿಶ್ವಾಸ ಎಲ್ಲರದ್ದಾಗಿದೆ. ಇಲ್ಲದಿದ್ದರೆ ಭಾರತಕ್ಕೆ ಚಿನ್ನದ ಪದಕ ಸಿಗುವುದು ಬಹಳ ಕಷ್ಟಕರ ಅನಿಸುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನ ಮಾಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.