ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಶಾಂತಿ ನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಿರವಾರ ಹಾಗೂ ವನಸಿರಿ ಫೌಂಡೇಶನ್ ರಾಜ್ಯ ಘಟಕ ರಾಯಚೂರು ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ತಾಯಿಗೊಂದು ಮರ ಕಾರ್ಯಕ್ರಮ,500 ವಿದ್ಯಾರ್ಥಿಗಳಿಗೆ 500 ಸಸಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ 36ನೇ ಹುಟ್ಟು ಹಬ್ಬವನ್ನು ಶಾಲೆಯ ಆವರಣದಲ್ಲಿ ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಶಾಲೆಯ ವಿದ್ಯಾರ್ಥಿಗಳಿಗೆ 500 ಸಸಿಗಳನ್ನು ಉಚಿತವಾಗಿ ವಿತರಣೆ ಮಾಡುವ ಮೂಲಕ ಆಚರಿಸಲಾಯಿತು.
ಅಮರೇಗೌಡ ಮಲ್ಲಾಪೂರ ಅವರು ಮಕ್ಕಳಿಗೆ ಉಚಿತವಾಗಿ ಸಸಿಗಳನ್ನು ನೀಡಲಾಗಿದ್ದು ಅವುಗಳನ್ನು ಮರವಾಗಿ ಬೆಳಸಿದವರಿಗೆ ಮುಂದಿನ ವರ್ಷ ಬಹುಮಾನ ನೀಡಿ ಗೌರವಿಸಲಾಗುವುದು.ತಾಯಿಗೆ ಹೇಗೆ ಬೆಲೆಕಟ್ಟಲಿಕ್ಕೆ ಆಗುವುದಿಲ್ಲವೋ ಹಾಗೆಯೇ ಮರಗಳಿಗೂ ಕೂಡ ಬೆಲೆ ಕಟ್ಟಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಮರಗಳನ್ನು ಬೆಳಸಿ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡಲು ಪ್ರಯತ್ನಿಸಬೇಕು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಬಸಲಿಂಗಪ್ಪ ಅರಕೇರಿ, ಪ್ರಾಚಾರ್ಯರಾದ ಅನುರಾಧ,ಮುಖ್ಯಗುರು ಬಾಬು,ಮಹೇಶ ಅರಕೇರಿ, ವನಸಿರಿ ಫೌಂಡೇಶನ್ ಸದಸ್ಯರಾದ ಗಿರಿಸ್ವಾಮಿ ಹೆಡಗಿನಾಳ,ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ, ಚನ್ನಪ್ಪ ಕೆ.ಹೊಸಹಳ್ಳಿ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ವೀರಬದ್ರಯ್ಯ ಸ್ವಾಮಿ ತಿಮ್ಮಾಪೂರ,ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.