ವಿಜಯನಗರ: ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ್ದ ತುಂಗಭದ್ರಾ ಜಲಾಶಯದ ಗೇಟ್ ನಂ. 19 ರ ಚೈನ್ ಲಿಂಕ್ ಕಟ್ ಆಗಿದ್ದರ ವಿಷಯಕ್ಕೆ ಸಂಭಂದಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು ಪ್ರತಿದಿನ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ನಾಳೆಯ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಆಗಿರುವ ಹಾನಿಯನ್ನು ವೀಕ್ಷಿಸಿದ ನಂತರ ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ನಾಳೆ ಬೆಳಗ್ಗೆ 11 ಗಂಟೆಗೆ ಎಚ್. ಎ. ಎಲ್ ವಿಮಾನ ನಿಲ್ದಾಣದಿಂದ ತೆರಳಿ 11.50 ಕ್ಕೆ ಕೊಪ್ಪಳ ತಾಲೂಕಿನ ಬಸಾಪುರದ ಹತ್ತಿರ ಇರುವ MSPL ಏರ್ ಸ್ಟ್ರಿಪ್ ಗೆ ಆಗಮಿಸಿ ನಂತರ ಅಲ್ಲಿಂದ ನೇರವಾಗಿ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.