ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಹೃದಯ ಭಾಗದಲ್ಲಿರುವ ಬಸವನ ಹೊಂಡದಲ್ಲಿ ಕಂಬಾರಗಟ್ಟಿ ಓಣಿಯ ನಿವಾಸಿ ಶಿವಾಜಿ ಭೂಶೆಟ್ಟಿ (56) ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೃತದೇಹ ಪತ್ತೆಯಾದ ಸುದ್ದಿ ತಿಳಿದ ನಂತರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸ್ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ವೇಳೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.ಮುಂಡಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾರ್ಚ್ ಅಂತ್ಯ ಎಂದು ತರಾತುರಿಯಲ್ಲಿ ಕಾಮಗಾರಿ ಪ್ರಾರಂಭ ಮಾಡಿಕೊಂಡ ಪಟ್ಟಣ ಪಂಚಾಯ್ತಿ ಅವರು ಆದಷ್ಟು ಬೇಗ ಕಾಮಗಾರಿ ಮುಗಿಸಿ, ಸಾರ್ವಜನಿಕರು ಬಸವನ ಹೊಂಡಕ್ಕೆ ಅತಿಕ್ರಮ ಪ್ರವೇಶ ಮಾಡದಂತೆ ಕ್ರಮ ಕೈಗೊಳ್ಳಬೇಕು ಮತ್ತು ಬಸವನ ಹೊಂಡಕ್ಕೆ ಸಿಸಿಟಿವಿ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ.
