ತುಮಕೂರು: ಗಡಿನಾಡ ಪಾವಗಡ ತಾಲೂಕಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಭೇಟಿ ನೀಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬರುವ ರೋಗಿಗಳಿಗೆ ಕುಡಿಯಲು ನೀರಿಲ್ಲ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಇಲ್ಲದಿರುವುದು ಬೇಸರದ ಸಂಗತಿ ಕೇವಲ ಮೂರು ಜನ ಡಾಕ್ಟರ್ ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಹೊರ ಗುತ್ತಿಗೆಯಿಂದ ಹೆಚ್ಚಿನ ವೈದ್ಯರನ್ನು ನೇಮಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.ಸಿ .ಕೆ. ಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಚಿಕಿತ್ಸೆ ನೀಡಲು ನರ್ಸ್ ಗಳನ್ನು ಮಾಹಿತಿ ಕೇಳುತ್ತಿದ್ದರು ಇವರು ವೈದ್ಯರು ಅಲ್ಲವೋ ಎನ್ನುವ ಅನುಮಾನ ಮೂಡುತ್ತದೆ ಎಂದು ತಿಳಿಸಿದರು. ಪಾವಗಡ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿ ಪಾವಗಡ ತಾಲೂಕಿನ ಸರ್ಕಾರಿ ಅಧಿಕಾರಿಗಳು ಮುಂದಿನ ಮೂರು ತಿಂಗಳಗಳಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ತಹಶೀಲ್ದಾರ್ ವರದರಾಜು,ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಜಾನಕಿರಾಮ್, ಡಾಕ್ಟರ್ ಕಿರಣ್, ಡಾಕ್ಟರ್ ಕಿರಣ್, ಸಿ.ಡಿ.ಪಿ.ಓ. ಸುನೀತಾ,ಇಂದ್ರಾಣಮ್ಮ,ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಂ.ಅರ್. ಸುರೇಶ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ:ಕೆ.ಮಾರುತಿ ಮುರಳಿ