ಶಿವಮೊಗ್ಗ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಹಾಗೂ ಕೇಂದ್ರ ಪುರಸ್ಕೃತ ಮಿಷನ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಣಾಧಿಕಾರಿ ಸಾಂಸ್ಥಿಕ ಸೇವೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾಂಸ್ಥಿಕ ಸೇವೆ ಮಕ್ಕಳ ರಕ್ಷಣಾಧಿಕಾರಿ ಡಿ.ಎಸ್.ಗಾಯತ್ರಿ ಅವರನ್ನು ಇಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ನೇರವಾಗಿ ವೀಕ್ಷಿಸಲು ವಿಶೇಷ ವ್ಯಕ್ತಿಯಾಗಿ ಗಾಯತ್ರಿ ಅವರನ್ನು ಆಯ್ಕೆ ಮಾಡಿದ್ದು ಅವರು ನಿರಂತರವಾಗಿ ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಕಾಯಿದೆ ಕಾನೂನುಗಳು ಇಲಾಖಾ ಕಾರ್ಯಕ್ರಮಗಳ ಕುರಿತು ಟಿ ಓ ಟಿ ತರಬೇತುದಾರರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಅವಿರತವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಮೂಲಕ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದಿರುವ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿದೆ.
ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ವಿವಿಧ ಯೋಜನೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರಿಗೆ ಇಂತಹ ಅವಕಾಶ ದೊರೆತಿದ್ದು, ಇದಕ್ಕೆ ಕಾರಣರಾದ ಭಾರತ ಸರ್ಕಾರ,ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಗಾಯತ್ರಿ ಅವರು ಧನ್ಯವಾದ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ.