ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರು ವಿಶೇಷ ಕಾಳಜಿ ವಹಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿಜಿಲ್ಲೆಯು ಹಿಂದುಳಿದ ಹಣೆಪಟ್ಟಿಯಿಂದ ಹೊರಬರಲು ದೃಢ ಸಂಕಲ್ಪ ಮಾಡೋಣ : ಜಿಲ್ಲಾಧಿಕಾರಿ

ಯಾದಗಿರಿ :ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ ಅವರ ಮನಮುಟ್ಟುವಂತೆ ಪಾಠ ಮಾಡಿ, ಮಕ್ಕಳ ಗೈರು ಹಾಜರು ತಪ್ಪಿಸಲು ಮನೆಮನೆಗೆ ಭೇಟಿ ನೀಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯು ಕಡಿಮೆ ಫಲಿತಾಂಶ ಬರುತ್ತದೆ ಎಂಬ ಹಣೆಪಟ್ಟಿಯಿಂದ ಹೊರಬರಲು ಬೋಧನೆಗೆ ವಿಶೇಷ ಒತ್ತು ನೀಡಬೇಕು ಹಾಗೂ ಜಿಲ್ಲೆಯು ಹಿಂದುಳಿದಿದೆ ಎಂಬ ಹಣೆಪಟ್ಟಿಯಿಂದ ಹೊರಬರಲು ಸಹ ದೃಢ ಸಂಕಲ್ಪ ಮಾಡೋಣ ಎಂದು ಸಲಹೆ ನೀಡಿ, ಆಗಾಗ ಪಾಲಕ ಪೋಷಕರ ಸಭೆ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ವಿಶೇಷ ತರಬೇತಿ, ಗುಂಪು ಚರ್ಚೆ, ವಿದ್ಯಾರ್ಥಿಗಳ ವೈಯಕ್ತಿಕ ಕಡತ ನಿರ್ವಹಣೆ, ಪರಿಹಾರ ಬೋಧನೆ, ವಿದ್ಯಾರ್ಥಿಗಳ ಗುಂಪು ರಚಿಸ ಶಿಕ್ಷಕರಿಗೆ ದತ್ತು ನೀಡುವುದು, ‘ಸ್ಪಷ್ಟ ಓದು, ಶುದ್ಧ ಬರಹ, ಸರಳ ಗಣಿತ’ ಅಂಶಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ ಅವರು ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಕಡ್ಡಾಯವಾಗಿ ನೈಜತೆಯಿಂದ ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಿ, ಅವರಿಗಾಗಿ ಒಂದು ಗಂಟೆ ವಿಶೇಷ ತರಗತಿಯನ್ನು ಮಾಡಿ ಮತ್ತು ಡಿಜಿಟಲ್ ಪಾಠಗಳನ್ನು ಡಯಟ್ ಅಧಿಕಾರಿಗಳಿಂದ ಹಾಗೂ ಕಲಿಕಾ ಟ್ರಸ್ಟ್ ಅವರಿಂದ ಮಕ್ಕಳಿಗೆ ಉಪಯೋಗವಾಗುವಂತೆ ಕ್ರಮವಹಿಸಬೇಕು. ಈ ಶೈಕ್ಷಣಿಕ ವರ್ಷದಲ್ಲಿ ನಮ್ಮ ಜಿಲ್ಲೆಯು ಉತ್ತಮ ಫಲಿತಾಂಶ ಬರುವಂತೆ ನೀವೆಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು. ಶಿಕ್ಷಕರ ಕೊರತೆ ಇರುವ ಶಾಲೆಗಳ ಪಟ್ಟಿಯನ್ನು ಸಂಬಂಧಿಸಿದ ಅಧಿಕಾರಿಗಳು ಕ್ರೂಢೀಕರಿಸಿ ನೆರೆಹೊರೆಯ ಪ್ರೌಢಶಾಲೆಯಿಂದ ತಾತ್ಕಾಲಿಕ ನಿಯೋಜನೆಗೆ ನಿಯಮನುಸಾರ ಕ್ರಮವಹಿಸಿ ಎಂದು ಅವರು ಸೂಚಿಸಿದರು.
ಡಿಡಿಪಿಐ ಮಂಜುನಾಥ ಹೆಚ್.ಟಿ ಅವರು ಮಾತನಾಡಿ, ಶಾಲೆಯ ಶಿಕ್ಷಕ ವೃಂದದವರು ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಅದಕ್ಕೆ ಅನುಗುಣವಾಗಿ ಕಾರ್ಯನಿರ್ತರಾಗಬೇಕೆಂದು ಮಾರ್ಗದರ್ಶನ ನೀಡಿದರು.
ಡಯಟ್ ಪ್ರಾಂಶುಪಾಲರಾದ ವೃಷಬೇಂದ್ರಯ್ಯ ಅವರು ಮಾತನಾಡಿ, ಮಕ್ಕಳ ನಿರಂತರ ಹಾಜರಾತಿಗಾಗಿ ಶಿಕ್ಷಕರು ಶ್ರಮ ವಹಿಸಬೇಕು. ನಿರಂತರ ಕಲಿಕೆ, ಮೌಲ್ಯ ಮಾಪನ ನಡೆಸಬೇಕು. ಫಲಿತಾಂಶಕ್ಕಾಗಿ ಕ್ರಿಯಾಯೋಜನೆಗಳು ಅನುಷ್ಠಾನಕ್ಕೆ ತರಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ, ವಿಷಯ ಪರಿವೀಕ್ಷಕ ಹಣಮಂತ ಎಚ್, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಉಪ ಯೋಜನಾ ಸಮನ್ವಯ ಅಧಿಕಾರಿಗಳು, ಡಯಟ್ ನ ಉಪನ್ಯಾಸಕರು, ವಿಷಯ ಪರಿವೀಕ್ಷಕರು ಹಾಗೂ ಎಲ್ಲಾ ಶಾಲೆಯ ಮುಖ್ಯ ಗುರುಗಳು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ, ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ