ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ತೀವ್ರವಾಗಿ ಖಂಡಿಸಿದ್ದರು.
ಈ ಕುರಿತು ಪ್ರಕಟಣೆ ನೀಡಿದ ಅವರು,ರಾಜ್ಯ ಭವನ ರಾಜಕೀಯ ಭವನವಾಗಿ ಪರಿವರ್ತನೆಗೊಂಡು ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಆಗಿರುವುದು ಸಂವಿಧಾನದ ಕಗ್ಗೊಲೆ ಎಂದರು. ಮುಡಾ’ ನಿವೇಶನ ವಿಚಾರದಲ್ಲಿ ಸಿದ್ದರಾಮಯ್ಯ ಯಾವುದೇ ಅಕ್ರಮ ಎಸಗಿಲ್ಲ. ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.ಒಬ್ಬ ಹಿಂದುಳಿದ ವರ್ಗದ ನಾಯಕ ಜನಪರ ಆಡಳಿತ ನಡೆಸುತ್ತಿರುವುದನ್ನು ಅರಗಿಸಿಕೊಳ್ಳಲಾಗದೆ ಕೇಂದ್ರ ಬಿಜೆಪಿ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಭವನವನ್ನು ಉಪಯೋಗಿಸಿಕೊಂಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ತಿಳಿಸಿದರು.ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಕೈಗೊಳ್ಳಬೇಕು. ಅವರ ಪರ ಸಂಘಟನೆ ನಿಲ್ಲುತ್ತದೆ. ಶೋಷಿತರು, ದಲಿತರ ನೇತೃತ್ವದಲ್ಲಿ ಹೋರಾಟ ರೂಪಿಸುತ್ತದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಹೈಕಮಾಂಡ್ ನಾಯಕರು, ಸಚಿವರು ಹಾಗೂ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ಪರ ಇದ್ದಾರೆ ಎಂದರು.
