ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ,ರಾಜಕೀಯ ಭವನವಾದ ರಾಜಭವನ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣದ ಪ್ರಾಸಿಕ್ಯೂಷನ್ ಯಾವಾಗ?ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ, ಮೊಟ್ಟೆ ಹಗರಣದ ತನಿಖೆ ಯಾವಾಗ? ಎನ್ನುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು.
ಪ್ರಾಸಿಕ್ಯೂಷನ್ ಹೆಸರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಗಾಲಿಜನಾರ್ದನ ರೆಡ್ಡಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಹಿಂದ ನಾಯಕನ ಶಕ್ತಿ ಹತ್ತಿಕ್ಕಲು ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ ಮಾಡುತ್ತಿದೆ ಎಂದು ಪಕ್ಷದ ನಾಯಕರು ಆರೋಪಿಸಿದರು. ಆಶೋಕ ವೃತ್ತದಿಂದ ಗಂಜ್ ಸರ್ಕಲ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ಕೆ.ರಾಜಶೇಖರ ಹಿಟ್ನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.