ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ,ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರು ಹಾಗೂ ಶಾಸಕ ಎಂ.ಆರ್. ಮಂಜುನಾಥ್ ರವರು ವಧುವಿನ ಕೈಗೆ ಮಾಂಗಲ್ಯ ವಿತರಣೆ ಮಾಡಿದರು.

ಬೆಳಿಗ್ಗೆ 10:05 ರಿಂದ 10.40 ರವರೆಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ  ಸಾಮೂಹಿಕ ವಿವಾಹ ನಿಗಧಿಯಾಗಿತ್ತು. ಬೆಳಿಗ್ಗೆ 10.07 ರ ವೇಳೆಗೆ ವರರು ವಧುಗಳ ಕೊರಳಿಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ 64 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಪೈಕಿ ತಮಿಳುನಾಡು ರಾಜ್ಯದಿಂದಲೂ 5 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದು ವಿಶೇಷವಾಗಿತ್ತು.

ಪ್ರಾಧಿಕಾರದ ವತಿಯಿಂದ ಮಧುವಿಗೆ ಚಿನ್ನದ 4 ಗ್ರಾಂ. ತೂಕದ ಚಿನ್ನದ ತಾಳಿ, ಬೆಳ್ಳಿ ಕಾಲುಂಗುರ, ಸೀರೆ ರವಿಕೆ, ವರನಿಗೆ ಪಂಚೆ, ಶರ್ಟ್, ಟವಲ್, ಪೇಟೆ ನೀಡಲಾಗಿತ್ತು.

ವೇದಿಕೆ ಕಾರ್ಯಕ್ರಮದಲ್ಲಿ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಜಿಗಳು ನೂತನ ವಧು ವರರಿಗೆ ಆಶೀರ್ವಚನ ನೀಡುತ್ತಾ, ಧಾರ್ಮಿಕ ಕೇಂದ್ರದಲ್ಲಿ ವಿವಾಹವಾದರೆ ಒಳಿತು ಆಗುತ್ತದೆ ಎಂಬ ನಂಬಿಕೆ. ಮಲೆಮಹದೇಶ್ವರ ಸ್ವಾಮಿಯವರ ಪುಣ್ಯ ಸನ್ನಿಧಿಯಲ್ಲಿ ವಿವಾಹವಾಗಿರುವ ನವ ಜೋಡಿಗಳು ರಾಗ, ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಅನೂನ್ಯತೆಯಿಂದ ಅರಿತು ಸುಖ ಶಾಂತಿಯಿಂದ ಬಾಳ್ವೆ ಮಾಡಿ. ಇದರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಮಲೆಮಾದಪ್ಪ ನಗರ ಪ್ರದೇಶಗಳಿಗಿಂತ ಬೆಟ್ಟಗುಡ್ಡ ಕಾಡುಗಳಲ್ಲಿ ಸುತ್ತಾಡಿ ನೆಲೆ ನಿಂತಿರುವ ಉದಾಹರಣೆಗಳಿವೆ. ಚಾ.ನಗರ ಜಿಲ್ಲೆಯನ್ನು ಕತ್ತಲರಾಜ್ಯ ಎಂದು ಕರೆಯುತ್ತಿದ್ದರು ಮಲೆಮಾದಪ್ಪ ಆಗಮನದ ಮೂಲಕ ಬೆಳಕಾಯಿತು. ಇಂದಿನ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪ್ರಾಧಿಕಾರದ ಕಾರ್ಯದರ್ಶಿ ನೇತೃತ್ವದಲ್ಲಿ ಅಚ್ಚುಕಟ್ಟಾಗಿ ನೆರೆವೇರಿಸಿರುವುದು ಶ್ಲಾಘನೀಯವಾದದ್ದು ಎಂದರು.

ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಲಕ್ಷಾಂತರ ಕೋಟ್ಯಂತರ ರೂ.ಗಳನ್ನು ವ್ಯಯಿಸಿ ಮದುವೆ ಮಾಡಿ ದುಂದು ವೆಚ್ಚ ಮಾಡುವ ಬದಲು ಸರಳ ವಿವಾಹವಾದರೆ ಉತ್ತಮ. ಬಡವರು ಸಾಲದ ಸುಳಿಗೆ ಸಿಲುಕಿರುವ ಅನೇಕ ಉದಾಹರಣೆಗಳು ಉಂಟು. ಸರಳ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿರುವ ನೂತನ ವಧು ವರರು ಸುಖ ಶಾಂತಿ ನೆಮ್ಮದಿಯಿಂದ ಬಾಳಿ ಎಂದು ಆಶಿಸಿದರು.

ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ ಸಾರಿಗೆ ಸಚಿವರಲ್ಲಿ ಮನವಿ ಮಾಡುತ್ತಾ ನಮ್ಮ ಕ್ಷೇತ್ರ ಭೌಗೋಳಿಕವಾಗಿ ವಿಸ್ತಾರವಾದ ಕ್ಷೇತ್ರ
ಇಂತಹ ಕ್ಷೇತ್ರಕ್ಕೆ ಹೆಚ್ಚಿನ ಬಸ್ ಸೌಕರ್ಯವನ್ನು ಒದಗಿಸಬೇಕು. ನಮ್ಮ ಭಾಗದಲ್ಲಿ ಅನೇಕ ಧಾರ್ಮಿಕ ಸ್ಥಳಗಳು ಇದ್ದು ದೇವಾಲಯಗಳಿಗೆ ತೆರಳುವ ರಸ್ತೆ ಅಭಿವೃದ್ಧಿಗೂ ಕ್ರಮವಹಿಸವಂತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಸಾಲೂರು ಬೃಹನ್ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಕಾಡ ಅಧ್ಯಕ್ಷ ಮರಿಸ್ವಾಮಿ, ಚಾಮಲ್ ಅಧ್ಯಕ್ಷ ನಾಗೇಂದ್ರ, ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಗುರುಪ್ರಸಾದ್, ಗ್ರಾ.
ಪಂ.ಅಧ್ಯಕ್ಷೆ ಅರ್ಚನ, ಇನ್ನಿತರರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ