ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ ಪಂಚಾಯತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಯಸುದಾ ಭೋವಿ ಹಾಗೂ ಉಪಾಧ್ಯಕ್ಷರಾಗಿ
ರಜಿಯಾಬಾನು ಕುಂಕೂರ ಆಯ್ಕೆಯಾಗಿದ್ದಾರೆ.
ಸರ್ಕಾರದ ಆದೇಶದ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಯರಿಗೆ ನಿಗಪಡಿಸಲಾಗಿತ್ತು.
ಮಂಗಳವಾರ ಮುಂಜಾನೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ತಹಶೀಲ್ದಾರ ಶಂಕರ ಗೌಡಿ
ಹಾಗೂ ಪ. ಪಂ ಮುಖ್ಯಾಧಿಕಾರಿ ಚಂದ್ರಶೇಖರ್ ಬಿ ಅವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಜಯಸುಧಾ ಬೋವಿ ಹಾಗೂ ಬಿಜೆಪಿಯಿಂದ ಶಕುಂತಲಾ ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ಜಯಸುದಾ ಭೋವಿ ಅವರು 12 ಮತಗಳನ್ನು
ಸಾಧಿಸಿದರೆ ಶಕುಂತಲಾ ನಾಯ್ಕ್ 8 ಮತಗಳನ್ನು ಪಡೆದು ಹಿನ್ನಡೆ ಸಾಧಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ರಜಿಯಾ ಬಾನು ಕುಂಕೂರ ಬಿಜೆಪಿಯಿಂದ ರಾಜೇಶ್ವರಿ ಅಂಡಗಿ ನಾಮಪತ್ರ ಸಲ್ಲಿಸಿದರು ರಜಿಯಾ ಬಾನು 12. ಮತಗಳನ್ನು ಪಡೆದರು ರಾಜೇಶ್ವರ್ ಅಂಡಗಿ ಎಂಟು ಮತಗಳನ್ನು ಪಡೆದು ಹಿನ್ನಡೆ ಸಾಧಿಸಿದರು
ಕಾಂಗ್ರೆಸ್ ಬೆಂಬಲಿತ 12 ಸದಸ್ಯರು,
ಬಿಜೆಪಿ ಬೆಂಬಲಿತ 7 ಸದಸ್ಯರು ಹಾಗೂ ಬಿಜೆಪಿಯ ನೂತನ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮತದಾನದಲ್ಲಿ ಭಾಗಿಯಾಗಿದ್ದರು.
ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ಸೇರಿದಂತೆ ಪಂಚಾಯತಿ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.
ಮುನ್ನಚ್ಚರಿಕೆಯ ಕ್ರಮವಾಗಿ ಪಟ್ಟಣ ಪಂಚಾಯತಿಯ ಆವರಣದಲ್ಲಿ ಸಿಪಿಐ ರಂಗನಾಥ ನೀಲಮ್ನನ್ನವರ ಮತ್ತು ಪಿಎಸ್ ಐ ಪರಶುರಾಮ ಮಿರ್ಜಿಗಿ ಅವರ ನೇತೃತ್ವದಲ್ಲಿ ಭಾರೀ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.