ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆಗೆ ಇದುವರೆಗೂ ದುರಸ್ತಿ ಭಾಗ್ಯವಿಲ್ಲವೆಂದು ಗುಂಡ್ಲಹಳ್ಳಿ ರಮೇಶ್ ಆರೋಪಿಸಿದ್ದಾರೆ.
ಪರಿಶಿಷ್ಟ ಪಂಗಡ ಸಮಾಜಕಲ್ಯಾಣ ಇಲಾಖೆಯಿಂದ
ನಡೆಯುತ್ತಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ 125 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು..
ಶಾಲೆಯ ಮುಂಭಾಗ ಮತ್ತು ವಸತಿ ನಿಲಯದಲ್ಲಿ ಮೇಲ್ಚಾವಣಿಯ ಪೆಚ್ಚುಗಳು ಬೀಳುವ ಹಂತದಲ್ಲಿದ್ದು
ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯನ್ನು ದುರಸ್ತಿಗೊಳಿಸಬೇಕೆಂದು ರಮೇಶ್ ಅಧಿಕಾರಿಗಳಿಗೆ ಮನವಿ ಮಾಡಿದರು.
ನಂತರ ವಸತಿ ಶಾಲೆಯ ಮುಖ್ಯ ಶಿಕ್ಷಕ ಸುದರ್ಶನ್ ಮಾತನಾಡಿ, ಶಾಲೆಯ ದುರಸ್ತಿಗೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು.
ಏನೇ ಆಗಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ಶಾಲೆಯನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕ ಅಭಿಪ್ರಾಯವಾಗಿದೆ.
ವರದಿ.ಕೆ.ಮಾರುತಿ ಮುರಳಿ



















