ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲೆಯಾದ್ಯಂತ ಶಾಂತಿ ಸೌಹಾರ್ದಯುತವಾಗಿ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಿಸಿ:ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ :ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆದ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆ ಕುರಿತ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಬ್ಬದ ಅಂಗವಾಗಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಶ್ರೀ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.
ಶ್ರೀ ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸಂಭ್ರಮದಿಂದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

ಸಮಾಜದ ಎಲ್ಲಾ ಭಾಂದವರು ಭಾವೈಕ್ಯತೆಯಿಂದ ಮತ್ತು ಸಂತಸದಿಂದ ಈ ಹಬ್ಬ ಆಚರಿಸಬೇಕು. ಇತರರಿಗೆ ನೋವಾಗದ ರೀತಿಯಲ್ಲಿ ಡಿಜೆ ಧ್ವನಿವರ್ಧಕಗಳನ್ನು ಬಳಸದೇ ಭಕ್ತಿ ಭಾವದಿಂದ ಆಚರಿಸಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸದೇ, ಸಾಂಸ್ಕೃತಿಕ ಮತ್ತು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಶ್ರೀ ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಅವರು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಕೂಡಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತು ಪಡಿಸಿ, ಉಳಿದ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬಂಧಿಸಿದ ಇಲಾಖೆಗಳಾದ ತಹಸೀಲ್ದಾರರ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಜೆಸ್ಕಾಂ ಇಲಾಖೆ, ನಗರ ಸಭೆ, ಅಗ್ನಿ ಶಾಮಕ ದಳ ಇಲಾಖೆಯವರಿಂದ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರತಿಷ್ಠಾಪಿಸಬೇಕು. ಪರವಾನಿಗೆ ಕುರಿತು ಏಕಗವಾಕ್ಷಿ ವ್ಯವಸ್ಥೆಯನ್ನು ನಗರ ಪೊಲೀಸ್ ಠಾಣೆ, ಯಾದಗಿರಿ, ಆಯಾ ತಾಲೂಕು ಕೇಂದ್ರಗಳು ಮತ್ತು ಗ್ರಾಮಗಳಲ್ಲಿ ಅರ್ಜಿಸಲ್ಲಿಸಿದ ಪೊಲೀಸ್ ಇಲಾಖೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲು ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶ್ರೀ ಗಣೇಶ ಪ್ರತಿಷ್ಠಾಪಿಸುವ ಪ್ರತಿಯೊಂದು ಸ್ಥಳದಲ್ಲಿ 10 ಜನ ಸ್ವಯಂ ಸೇವಕರು ನೇಮಕ ಮಾಡಲು ಹಾಗೂ ಕಮಿಟಿಯಲ್ಲಿಯ ಸದಸ್ಯರ ಕುರಿತಾದ ವರದಿಯನ್ನು ಸಂಬಂಧಿಸಿದ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಸಂಬಂಧ ಪಟ್ಟ ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ಪ್ರತಿಯೊಂದು ಗಣೇಶ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಸೂಕ್ತ ಪೋಲೀಸ್ ಮತ್ತು ಹೋಮ್‌ಗಾರ್ಡ ಸಿಬ್ಬಂದಿಯವರನ್ನು ಬಂದೋಬಸ್ತಗಾಗಿ ನಿಯೋಜಿಸಿ, ನಿಯಂತ್ರಿಸಿಕೊಂಡು ಹೋಗಲು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಗಣೇಶ ಪ್ರತಿಮೆಯ ವಿಸರ್ಜನೆಯನ್ನು ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ವಿಸರ್ಜಿಸತಕ್ಕದೆಂದು ಹಾಗೂ ಸಣ್ಣ ಕೆರೆಯ ಸುತ್ತಮುತ್ತ ಇರುವ ಮುಳ್ಳುಕಂಟಿಗಳನ್ನು ತೆಗೆದು ಹಾಗೂ ರಸ್ತೆ ದುರಸ್ತಿ ಮಾಡಿ ರಸ್ತೆಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ಹಾಗೂ ಸ್ಥಳದಲ್ಲಿ ಜೆ.ಸಿ.ಬಿ. ಮತ್ತು ಜನರೇಟರ್‌ಗಳ ವ್ಯವಸ್ಥೆಯನ್ನು ಮಾಡಲು ನಗರಸಭೆ ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಕಡೆಯಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಮಾರ್ಗದ ಮಧ್ಯದ ವಿದ್ಯುತ್ ತಂತಿ ಸರಿಪಡಿಸಬೇಕು. ಗಿಡ ಗಂಟಿಗಳನ್ನು ತೆರವುಗೊಳಿಸಲು ಸೂಚಿಸಿದರು.

ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿವಸಗಳಂದು ವಿಸರ್ಜನೆಯ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ಹಾಗೂ ಫೈರ್ ಇಂಜೀನ್‌ನ ವ್ಯವಸ್ಥೆಯನ್ನು ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಾದಗಿರಿ ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಗಣೇಶ ಮೂರ್ತಿ ವಿಸರ್ಜನೆಯನ್ನು ಭೀಮಾ ಮತ್ತು ಕೃಷ್ಣಾ ನದಿಯಲ್ಲಿ ಅಥವಾ ಯಾವುದೇ ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಕೂಡದು. ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿನಗಳಂದು ವಿದ್ಯುತ್ ವ್ಯತಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಇಲಾಖೆಗೆ ಹಾಗೂ ಸೂಕ್ತ ಪೊಲೀಸ್ ಬಂದೊಬಸ್ತಗೆ ಸೂಚಿಸಿದರು.

ಗಣೇಶ ವಿಸರ್ಜನೆಯ ದಿನದಂದು ಸಂಚಾರ ವ್ಯವಸ್ಥೆಗೆ ಅಡೆ ತಡೆಯಾಗದಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಹಕರಿಸಲು ತಿಳಿಸಲಾಯಿತು.

ಯಾದಗಿರಿ ಸಮಾಜದ ಮುಖಂಡರ ಕೋರಿಕೆಯಂತೆ, ಗಣೇಶ ವಿಸರ್ಜನಾ ಹೊಂಡದ ಪಕ್ಕದಲ್ಲಿ ಪರಿಣಿತ ಈಜುಗಾರರನ್ನು ಹಾಗೂ ಅಗ್ನಿಶಾಮಕ ಇಲಾಖೆಯವರು ಸದರಿ ಸಮಯದಲ್ಲಿ ಇರುವ ಹಾಜರಿರುವ ಕುರಿತು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಯ ಹೊಗೆಯು ಮಾಲಿನ್ಯಕಾರಕ ಹಾಗೂ ಕಿವಿಗೆ ಹಾನಿಕಾರಕವಾದ್ದರಿಂದ, ಪಟಾಕಿಗಳನ್ನು ಸಿಡಿಸಬಾರದು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಉಪಯೋಗಿಸಬಾರದು. ಯಾದಗಿರಿ ಜಿಲ್ಲೆಯಾದ್ಯಂತ ಗಣೇಶ ವಿಗ್ರಹವನ್ನು ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಕೊಂಡೊಯ್ಯುವ ಪ್ರತಿಯೊಂದು ವಾಹನದ ಚಾಲಕರು ಸುಸ್ಥಿತಿಯಲ್ಲಿರುವಂತೆ (ಮದ್ಯಪಾನ ಮಾಡದೆ) ಹಾಗೂ ಗಣೇಶ ವಿಗ್ರಹವನ್ನು ಹಿಡಿಯುವ ವ್ಯಕ್ತಿಗಳೂ ಸಹ ಎಚ್ಚರಿಕೆ ವಹಿಸಲು ಎಲ್ಲಾ ಸಮಿತಿಯವರಿಗೆ ವಿಶೇಷವಾಗಿ ಗಣೇಶ ಉತ್ಸವದ ಮೇಲ್ವಿಚಾರಣೆಗಾಗಿ ನೇಮಕ ಮಾಡಲಾದ ಸಮಿತಿಯವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ , ಸಿಪಿಐ ಸುನಿಲ್ ಮೂಲಿಮನಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಮುಖಂಡರಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಬಾಬು ದೋಖಾ, ಮರೆಪ್ಪ ಚಟ್ಟೆರಕರ್ ಇನ್ನಿತರ ಯುವ ಮುಖಂಡರು ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ