ಬೀದರ್ ಜಿಲ್ಲೆಯ ನೂತನ ತಾಲೂಕು ಕೇಂದ್ರವಾಗಿರುವ ಹಲಸೂರು ಪಟ್ಟಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಜೆ ಜೆ ಎಂ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಶ್ರೀ ವಿಶ್ವಗುರು ಬಸವೇಶ್ವರ ಅಭಿವೃದ್ಧಿ ಟ್ರಸ್ಟ್ ನ ಪ್ರಮುಖರು ಹಾಗೂ ಪದಾಧಿಕಾರಿಗಳು ಮತ್ತು ಸಾರ್ವಜನಿಕರಿಂದ ಪಟ್ಟಣದ ತಹಸೀಲ್ ಕಛೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು ಕಳೆದ ಕೆಲವು ದಿನಗಳ ಹಿಂದೆ ಜಲ್ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ 6 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ಕಾಮಗಾರಿ ನಿಲ್ಲಿಸಬೇಕು ಎಂದು ಜಿಲ್ಲಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಸಹ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೀದರ್ ಜಿಲ್ಲೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಮಲಿಂಗ ಬಿರಾದರ್ ಮಾತನಾಡಿ ಮುಂದಿನ ಎರಡು ತಿಂಗಳ ಒಳಗಾಗಿ ಧರಣಿ ನಿರತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲಿಖಿತ ಭರವಸೆ ನೀಡಿದ ನಂತರ ಸಂಜೆ 6 ಗಂಟೆಗೆ ಉಪವಾಸ ಸತ್ಯಾಗ್ರಹ ಕೈಬಿಡಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರರಾದ ಶಿವಾನಂದ್ ಮೇತ್ರಿ, ತಾ.ಪಂ. ಇಓ ವೈಜಣ್ಣ ಫುಲೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಶಿವರಾಜ್ ಪಲ್ಲೇರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರ ಮನ ಒಲಿಸುವಲ್ಲಿ ಯಶಸ್ವಿಯಾದರು.ವಿಶ್ವಗುರು ಬಸವೇಶ್ವರ ಅಭಿವೃದ್ಧಿ ಟ್ರಸ್ಟ್ ನ ಪ್ರಮುಖರಾದ ಪ್ರವೀಣ್ ಕಾಡದಿ, ಆಕಾಶ್ ಖಂಡಾಳೆ, ಶಿವರಾಜ್ ಖಪಾಳೆ, ಸುನಿಲ್ ಕಾಡದಿ, ಗುಲಾಂ ಬಡಾಯಿ, ಸಂತೋಷ್ ಗಾಯಕ್ವಾಡ್, ಲೋಕೇಶ್ ಡಬಾಲೆ ಉಪಸ್ಥಿತರಿದ್ದರು. ಉಪವಾಸ ಸತ್ಯಾಗ್ರಹ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೀದರ್ ಜಿಲ್ಲೆಯ ಅವರಾದ ನ ಹಿರಿಯ ಸಾಮಾಜಿಕ ಹೋರಾಟಗಾರ ಗುರುನಾಥ್ ವಡ್ಡೆ ಅವರು ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದರು.
ವರದಿ: ಸಂದೀಪ್ ಕುಮಾರ್