ಕಾರವಾರ: ದಿನಾಂಕ 20/08/2024 ರಿಂದ 15/12/2024 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗಿದ್ದು, ಯುವ ಮತದಾರರು ಮತ್ತು ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ನಮೂನೆ 6ರಲ್ಲಿ ,ಹೆಸರು ಕಡಿಮೆಗೊಳಿಸಲು ನಮೂನೆ-7ರಲ್ಲಿ, ಹೆಸರು ತಿದ್ದುಪಡಿ ,ವರ್ಗಾವಣೆ ಮಾಡಲು ನಮೂನೆ 8 ರಲ್ಲಿ ದಾಖಲಿಸಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ ಅಥವಾ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಮೂಲಕವೂ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
