ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಾನಸಿಕ ವಿಕಾಸದ ಜೊತೆಗೆ ದೈಹಿಕ ಬೆಳವಣಿಗೆಯು ಅಗತ್ಯ -ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ಅಭಿಮತ

ಬೀದರ್: ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ ಎಂಬ ಸ್ವಾಮಿ ವಿವೇಕಾನಂದರ ವೇದ ವಾಕ್ಯದಂತೆ ಮಾನಸಿಕ ವಿಕಾಸದ ಜೊತೆಗೆ ದೈಹಿಕ ಬೆಳವಣಿಗೆಯು ಅಗತ್ಯವಾಗಿದೆ. ಕ್ರೀಡೆಯು ನಮ್ಮ ಜೀವನದ ಒಂದು ದೊಡ್ಡ ಭಾಗವಾಗಿದೆ ಎಂದು ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಬೀದರನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಮೇಜರ್ ಧ್ಯಾನಚಂದ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆರೋಗ್ಯಕರ ಮತ್ತು ಸದೃಢ ಯುವಕರ ನಿರ್ಮಾಣದಲ್ಲಿ ಕ್ರೀಡೆಯ ಮಹತ್ವ ಹೆಚ್ಚಿದೆ, ರಾಷ್ಟ್ರೀಯ ಕ್ರೀಡಾ ದಿನಾಚರಣೆಯು ಕ್ರೀಡೆಗಳ ಮೌಲ್ಯ, ಶಿಸ್ತು, ಸಂಯಮ, ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯತ್ತ ಒಲವು ತೋರಿಸುವಂತೆ ಪ್ರೇರೇಪಣೆ ಮಾಡಲು ರಾಷ್ಟ್ರೀಯ ಕ್ರೀಡಾ ದಿನಚರಣೆಯನ್ನು ಆಚರಿಸಲಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಡಾ.ಸಂತೋಷಕುಮಾರ ಸಜ್ಜನ ಅವರು ಮಾತನಾಡಿ ಇಂದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ ಮತ್ತು ಆಟಗಳಲ್ಲಿ ಪ್ರೋತ್ಸಾಹಿಸುವಂತೆ ಶಿಕ್ಷಕರು ಪ್ರೇರಣೆ ನೀಡಬೇಕು. ವಿದ್ಯಾರ್ಥಿಗಳು ಮೊಬೈಲ್ ಆಟಿಕೆಗೆ ಸೀಮಿತವಿದ್ದು ಇದರಿಂದ ವಿದ್ಯಾರ್ಥಿಗಳಲ್ಲಿ ಸೋಮಾರಿತನ ಮತ್ತು ಆಯಾಸ ಹೆಚ್ಚಾಗುತ್ತಿದ್ದು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಜೀವನ ಶೈಲಿಗೆ ಕ್ರೀಡೆಗಳು ಮತ್ತು ಆಟಗಳ ಮಹತ್ವವನ್ನು ಹಾಗೂ ದೈಹಿಕ ಆರೋಗ್ಯದ ಜೊತೆಗೆ ತಮ್ಮ ಜೀವನ ಶೈಲಿಯನ್ನು ಸುಧಾರಿಸಲು ಸಾಧ್ಯ ಎಂದು ತಿಳಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಸಿದ್ರಾಮ ನೆಂಗಾ ಕ್ರೀಡೆಗಳ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವೀಣಾ ಜಲಾದೆ, ಶಿಲ್ಪಾ ಹಿಪ್ಪರಗಿ, ರಾಜಕುಮಾರ ಸಿಂಧೆ, ಪಾಂಡುರಂಗ ಕುಂಬಾರ, ನೂರಪಾಶಾ, ಸಂಗೀತಾ ಪಾಟೀಲ ಸಿಬ್ಬಂದಿ ವರ್ಗದವರಾದ ಅಶೋಕ ರೇವಣಿ, ಸುವರ್ಣಾ ಪಾಟೀಲ, ಪುಷ್ಪಾವತಿ ಶೆಟಕಾರ, ರೇವಣಪ್ಪಾ, ಮಹೇಶ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿವಶರಣು ನಿರೂಪಿಸಿದರು, ದೀಪಾಲಿ ಸ್ವಾಗತಿಸಿದರು, ಪಾಟೀಲ ಪಾರ್ವತಿ ವಂದಿಸಿದರು.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ