ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪಾವಗಡ ತಾಲೂಕು ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಾಗಾರ

ತುಮಕೂರು:ಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಪಾವಗಡದಲ್ಲಿ ಇಂದು ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವನ್ನು ನಡೆಸಲಾಯಿತು.ಪ್ರೌಢಶಾಲಾ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಡಯಟ್ ಉಪನ್ಯಾಸಕರು ಹಾಗೂ ನೋಡಲ್ ಅಧಿಕಾರಿಗಳಾದ ಚಿತ್ತಯ್ಯ ರವರು ವಿಜ್ಞಾನ ಶಿಕ್ಷಕರು ಹೆಚ್ಚು ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಶಾಲೆಗಳ ಫಲಿತಾಂಶಗಳು ಉತ್ತಮಗೊಳ್ಳುತ್ತವೆ ಎಂದರು. ಮೂಲ ವಿಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಬರುವಂತೆ ಮಾಡುವ ಕೆಲಸವನ್ನು ವಿಜ್ಞಾನ ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು. ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ತಿಳಿಸಿದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಶ್ರೀರಾಮ್ ರವರು ಮಾತನಾಡಿ ನಮ್ಮ ಶಾಲೆಯು ಇಲಾಖೆಯ ಯಾವುದೇ ಕಾರ್ಯಗಳು ನಡೆಸಲು ಉತ್ಸಾಹ ತೋರಿಸುತ್ತದೆ. ಕಾರ್ಯಗಾರದ ಪ್ರಯೋಜನವನ್ನು ಎಲ್ಲಾ ಶಿಕ್ಷಕರು ಪಡೆಯಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಪ್ರಾಧ್ಯಾಪಕರಾದ ಸುಬ್ಬಯ್ಯರವರು ಆಮ್ಲಗಳು ಪ್ರತ್ಯಾಮ್ಲಗಳು ಮತ್ತು ಲವಣಗಳು ರಾಸಾಯನಿಕ ಕ್ರಿಯೆಗಳು ಮತ್ತು ಸಮೀಕರಣಗಳು ಎಂಬ ವಿಷಯದ ಮೇಲೆ ಸುದೀರ್ಘವಾಗಿ ಶಿಕ್ಷಕರೊಂದಿಗೆ ಯಶಸ್ವಿಯಾಗಿ ಸಂವಾದ ನಡೆಸಿದರು. ಶಿಕ್ಷಕರ ಎಲ್ಲಾ ರೀತಿಯ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡಿ ತರಗತಿಯ ಕೋಣೆಯೊಳಗೆ ಶಿಕ್ಷಕರು ಪಾಠ ಮಾಡುವ ವಿಧಾನವನ್ನು ಸವಿವರವಾಗಿ ತಿಳಿಸಿದರು. ಎಸ್ ಎಸ್ ಎಲ್ ಸಿ ಫಲಿತಾಂಶದ ವೃದ್ದಿಗೆ ಈ ಕಾರ್ಯಗಾರವು ಉತ್ತಮವಾಗಿ ನೆರವಾಯಿತು ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆ ಅಧ್ಯಕ್ಷ ಬಿ ರವೀಂದ್ರ. ಕಾರ್ಯದರ್ಶಿ ಮಹೇಶ್ವರಪ್ಪ. ಮಧುಗಿರಿ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಕಟ್ಟಾ ನರಸಿಂಹಮೂರ್ತಿ. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಜಬಾಬು. ವಿಜ್ಞಾನ ವೇದಿಕೆ ಖಜಾಂಚಿ ರೇಣುಕರಾಜ್.ಬಿ ಆರ್ ಪಿ ದೇವರಾಜ, ಮುರುಗೇಶ್ ಗಚ್ಚಿನಮಠ. ಶಿಕ್ಷಣ ಸಂಯೋಜಕರಾದ ಚಂದ್ರಶೇಖರ್ ರಂಗನಾಥ್. ಖಾಜಾ ಹುಸೇನ್. ಮುಖ್ಯ ಶಿಕ್ಷಕ ದಯಾನಂದ್ ಭಾಗವಹಿಸಿದ್ದರು.

ವರದಿ.ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ