ಬೀದರ್ :ತಾಲೂಕಿನ ಅಲಿಯಂಬರ್ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಾಯಿ ಚೈತನ್ಯ ಸಂಜುಕುಮಾರ ಕೊಳಿ ಅವರಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷರಾದ ಸಂತೋಷ್ ಪಡಸಲೆ ಅವರಿಂದ ಗೌರವ ಸನ್ಮಾನ ಮಾಡಲಾಯಿತು.
ಪ್ರಭಾರಿ ಮುಖ್ಯೋಪಾಧ್ಯಾಯರು ರಮೇಶ ಸರ್ ಅವರು ಸಾಥ್ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಯಿ ಚೈತನ್ಯ ಸಂಜುಕುಮಾರ ಕೋಳಿ ಅವರು ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಕಾಮಗಾರಿಗಳನ್ನು ತರಲು ಶ್ರಮಿಸುತ್ತೇನೆ ಜೊತೆಗೆ ನಮ್ಮ ಗ್ರಾ.ಪಂ. ಅನುದಾನದಲ್ಲಿ ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆಂದು ನುಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ನೂತನ ಗ್ರಾ .ಪಂ.ಅಧ್ಯಕ್ಷರಿಗೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.
ವರದಿ: ಸಾಗರ ಪಡಸಲೆ
