ಪಾವಗಡ:ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ವತಿಯಿಂದ ನಿಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು ಮಹರ್ಷಿ ವಾಲ್ಮೀಕಿ ಆಶ್ರಮದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕನ್ನಡ ಪರ ಸಂಘಟನೆಗಳು ಮುಂದೆ ಬಂದು ಸಹಾಯ ಸಹಕಾರ ನೀಡಿ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಕರವೇ ಗೌರವಾಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ ಗಡಿನಾಡ ಕನ್ನಡ ಶಾಲೆಗಳ ಅಭಿವೃದ್ಧಿಗೆ ಗಡಿನಾಡ ಕನ್ನಡ ಪರ ಸಂಘಟನೆಗಳು ಸಹಾಯ ಸಹಕಾರ ಮಾಡಿದರೆ ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಉಳಿಯುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಅಧ್ಯಕ್ಷ ಲಕ್ಷ್ಮೀನಾರಾಯಣ,ಶಿಕ್ಷಕಿ ಶ್ರೀಮತಿ ಭಾರತಿ ಪಾಳೆಗಾರ್, ಪ್ರಥಮ ದರ್ಜೆ ಗುತ್ತಿಗೆದಾರರ ಮಂಜುನಾಥ ಎಂ.,ಪದಾಧಿಕಾರಿಗಳಾದ ಓಂಕಾರ ನಾಯಕ, ಭಾಸ್ಕರ್ ನಾಯಕ, ಶಿವು ,ಮಣಿ, ತಿಮ್ಮಯ್ಯ, ಜಗದೀಶ್ ,ಪಾಲಾಕ್ಷ. ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ. ಕೆ. ಮಾರುತಿ ಮುರಳಿ