ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡೆಯಿಂದ ಶಿಸ್ತು ಬೆಳೆಯಲು ಸಾಧ್ಯವಿದೆ

ಶಿವಮೊಗ್ಗ : ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಶಿವಮೊಗ್ಗದ ಶಾಸಕರಾದ ಚನ್ನಬಸಪ್ಪ ಕ್ರೀಡಾಪಟುಗಳಿಗೆ ತಿಳಿಸಿದರು.
ಶಿವಮೊಗ್ಗದ ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 19 ವರ್ಷ ವಯೋಮಿತಿಯೊಳಗಿನ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಸರ್ದಾರ್ ಜಾಫರ್ ಸ್ಮರಣಾರ್ಥವಾಗಿ ಎರಡು ದಿನ ನಡೆಯುವ “ಯುನೈಟೆಡ್ ಕಪ್” ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಅವರು, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.
ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಹಾಗೂ ಕೆ. ಎಸ್. ಶಶಿ ಯವರು ಸುಮಾರು ವರ್ಷಗಳಿಂದ ವಾಲಿಬಾಲ್ ಕ್ರೀಡೆಗೆ ಸಹಕಾರ ಕೊಡುತ್ತಾ ಬಂದಿದ್ದು, ಇವತ್ತು ವಾಲಿಬಾಲ್ ಕ್ರೀಡೆ ಶಿವಮೊಗ್ಗದಲ್ಲಿ ಇಷ್ಟೊಂದು ಜನಪ್ರಿಯ ಕ್ರೀಡೆಯಾಗಿ ಬೆಳೆಯಲು ಸಾಧ್ಯವಾಯಿತು ಎಂದು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.
ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ ಆಶೀರ್ವಚನ ನೀಡುತ್ತಾ ಜೀವನದಲ್ಲಿ ಶಿಸ್ತಿನ ಮೂಲಕ ದಾರಿ ಸಾಗಿಸಿದಲ್ಲಿ ಮಾತ್ರ ಬದುಕಿನ ಪ್ರತಿ ಹಂತಗಳಲ್ಲಿ ಒಂದೊಂದು ಮೆಟ್ಟಿಲನ್ನು ಹತ್ತಲು ಸಾಧ್ಯ, ಶಿಸ್ತಿನ ಬದುಕು ಅತ್ಯಂತ ಉತ್ತಮ ಎಂದರು. ನಾವು ಜೀವನದಲ್ಲಿ ಓದುವುದು,ಆಡುವುದು ಕೇಳುವುದು, ಹೇಳುವುದು ಮುಖ್ಯವಾಗುವುದಿಲ್ಲ ಅದು ಶಿಸ್ತಿನಿಂದ ಇದ್ದಾಗ ಮಾತ್ರ ಸಮರ್ಪಕವಾಗಿರುತ್ತದೆ ಎಂದು ವಿವರಣೆ ನೀಡಿದರು.
ಕ್ರೀಡೆ ಎಂದರೆ ಕೇವಲ ಆಟವಲ್ಲ ಅದು ಪ್ರತಿ ವಿದ್ಯಾರ್ಥಿಗಳ ಪ್ರಮುಖ ಘಟ್ಟವಾಗುತ್ತದೆ.ಕ್ರೀಡೆ ಶಿಸ್ತು ಬದ್ದ ಜೀವನವನ್ನು ಕಲಿಸುತ್ತದೆ ಎಂದರು.ಕ್ರೀಡಾ ಸ್ಪೂರ್ತಿಯಿಂದ ವಾಲಿಬಾಲ್ ಕ್ರೀಡೆಯಲ್ಲಿ ಚೆನ್ನಾಗಿ ಆಡಿ ಎಂದು ಕ್ರೀಡಾ ಪಟುಗಳಿಗೆ ತಿಳಿಸಿದರು.
ಮುಖ್ಯ ಅತಿಯಾಗಿ ಆಗಮಿಸಿ ಮಾತನಾಡಿದ ಮಾಜಿ ಶಾಸಕರಾದ ಆಯನೂರ್ ಮಂಜುನಾಥ್ ಕ್ರೀಡೆಯಲ್ಲಿ ಕ್ರೀಡಾ ಸ್ಪೂರ್ತಿಯಿಂದ, ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳು ಕರೆ ನೀಡಿದರು. ಶಿವಮೊಗ್ಗದಲ್ಲಿ ವಾಲಿಬಾಲ್ ಕ್ರೀಡೆ ಕೆಳಹಂತದಿಂದ ಇವತ್ತು ರಾಜ್ಯ ರಾಷ್ಟ್ರಮಟ್ಟದ ಕ್ರೀಡಾ ಪ್ರತಿಭೆಗಳು ಬೆಳೆಯುವಲ್ಲಿ ಇಂತಹ ಪಂದ್ಯಾವಳಿಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿ ಯು ಕಾಲೇಜಿನ ಉಪ ನಿರ್ದೇಶಕರಾದ ಚಂದ್ರಪ್ಪ ಗುಂಡಾಪಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕರಾದ ರೇಖ್ಯಾ ನಾಯ್ಕ, ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಶ್ರೀನಾಥ್, ಕಾರ್ಯದರ್ಶಿ ಡಾ.ಪ್ರಸನ್ನ, ಪ್ರತಿಭಾ ಜಾಫರ್, ರವೀಂದ್ರ ಪಾಟೀಲ್, ಹಿರಿಯ ವಾಲಿಬಾಲ್ ಆಟಗಾರ ರಾಮಣ್ಣ, ಲಯನ್ಸ್ ಕ್ಲಬ್ ಅಧ್ಯಕ್ಷ ಪರಮೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಇಂದಿನಿಂದ ಎರಡು ದಿನಗಳವರೆಗೆ ವಾಲಿಬಾಲ್ ಕ್ರೀಡಾಕೂಟ ನಡೆಯಲಿದ್ದು, ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಸುಮಾರು ವರ್ಷಗಳಿಂದ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುತ್ತ ಬಂದಿದ್ದು, ಈ ಬಾರಿ ಜಿಲ್ಲೆಯ ಪಿಯು ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕ್ಲಬ್ ನ ಹಿರಿಯ ಕ್ರೀಡಾಪಟು ಸರ್ದಾರ್ ಜಾಪರ್ ಸ್ಮರಣಾರ್ಥವಾಗಿ ಈ ಪಂದ್ಯಾವಳಿ ಆಯೋಜಿಸಲಾಗುತ್ತಿದೆ ಎಂದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ