ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಕುಟುಂಬದವರಿಗೆ ಭೇಟಿಯಾಗಬೇಕು ಮತ್ತು ಅವರ ಕುಟುಂಬದವರಿಗೆ ನೈತಿಕ ಸ್ಥೈರ್ಯ ತುಂಬಿ ಸಾಂತ್ವಾನ ಹೇಳಿ ನೊಂದ ರೈತನ ಕುಟುಂಬಕ್ಕೆ ಪರಿಹಾರ ಧನ 10 ಲಕ್ಷ ರೂಪಾಯಿ ವಿತರಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚಿನ ದಿನಮಾನಗಳಲ್ಲಿ ರೈತರು ಅತಿವೃಷ್ಟಿಯಿಂದ ಅಥವಾ ಅನಾವೃಷ್ಟಿಯಿಂದ ಬೆಳೆದ ಬೆಳೆ ಕೈಗೆ ಬರದೆ ಅಥವಾ ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ಸಾಲದ ಸುಳಿಗೆ ಸಿಕ್ಕು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಬಿಳವಾರ ಗ್ರಾಮದ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರು ಸಾಲದ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಮತಕ್ಷೇತ್ರದ ಶಾಸಕರು ಕುಟುಂಬಸ್ಥರಿಗೆ ಭೇಟಿ ನೀಡಿ ಪರಿಹಾರ ಧನ ವಿತರಣೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.