ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಳಿಕೋಟೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ
ದಿ.30-08-2024 ರಂದು ಶ್ರೀ ಎಚ್ ಎಸ್ ಪಾಟೀಲ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಳಿಕೋಟೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬ.ಸಾಲವಾಡಗಿ ಕ್ಲಸ್ಟರ್ ನ ಬ್ರಿಲಿಯಂಟ್ ಶಾಲೆ ಮೈಲೇಶ್ವರದ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕರ ವಿಭಾಗದ ಗುಂಪು ಆಟಗಳಾದ ಖೋ ಖೋ, ವಾಲಿಬಾಲ್, ಥ್ರೋ ಬಾಲ್ ಮತ್ತು 4×100 ಮೀ. ರಿಲೇ ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಗುಂಪು ಆಟಗಳಾದ ಕಬಡ್ಡಿಯಲ್ಲಿ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಉಳಿದಂತೆ ವೈಯಕ್ತಿಕ ಆಟಗಳಲ್ಲಿಯೂ ನಮ್ಮ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳ ಅತ್ಯುತ್ತಮ ಸಾಧನೆಗೆ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎನ್ ಬಿ ನಡುವಿನಮನಿ, ಸರ್ವ ಆಡಳಿತ ಮಂಡಳಿ, ಬ್ರಿಲಿಯಂಟ್ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.

ವರದಿ-ರಾಮಪ್ಪ.ಪಿ.ತಂಬೂರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ