ಕಲಬುರಗಿ:ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ,ವಸತಿ ಶಾಲೆ, ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕರಾಟೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ಸರಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ ಯಾಕೆಂದರೆ 2013ರಲ್ಲಿ ನಿರ್ಭಯ ಅತ್ಯಾಚಾರ ಪ್ರಕರಣದ ಬಳಿಕ ಸರ್ಕಾರದಿಂದ ಈ ಯೋಜನೆಯನ್ನು 2017ರವರೆಗೆ ವಿಸ್ತರಿಸಲಾಯಿತು ಅನುದಾನದ ಕೊರತೆಯಿಂದಾಗಿ 2021ರಿಂದ 2022-23ರ ವರೆಗೆ ಮತ್ತೆ ಈ ಯೋಜನೆಗೆ ಚಾಲನೆ ನೀಡಲಾಯಿತು ಆದರೆ ಈ ಬಾರಿಯ 2024 -25ಸಾಲಿನಲಿ ಅನುದಾನದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಅದೇ ರೀತಿಯಾಗಿ ರಾಜ್ಯದ ಶಾಲಾ ಕಾಲೇಜಿನ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 2024-25ರ ಸಾಲಿನ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಕರಾಟೆ ಶಿಕ್ಷಕರಿಗೋಸ್ಕರ ಪ್ರತ್ಯೇಕವಾದ ಅನುದಾನ ಬಿಡುಗಡೆಗೊಳಿಸಿ ಕ್ರಾಂತಿಕಾರಕ ನಿರ್ಧಾರಕ್ಕೆ ಇಂದಿನ ರಾಜ್ಯ ಸರ್ಕಾರ ಪಣತೊಡಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ರಾಜ್ಯದ ಶಿಕ್ಷಣ ಸಚಿವರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಅತಿ ಶೀಘ್ರದಲ್ಲಿ ಕರಾಟೆ ಶಿಕ್ಷಕರ ಅನುದಾನ ಬಿಡುಗಡೆಗೊಳಿಸಬೇಕು. ಅದೇ ರೀತಿಯಾಗಿ ಸಮಾಜ ಇಲಾಖೆಯ ಆದೇಶದಂತೆ ಪ್ರತಿಯೊಂದು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿದಾರರು ವಸತಿ ಶಾಲೆಗಳಲ್ಲಿ ರಾಜ್ಯದಾದ್ಯಂತ ತರಬೇತಿ ನೀಡಿದ್ದಾರೆ ಆದಕಾರಣ 2023ರ ಕರಾಟೆ ಶಿಕ್ಷಕರ ಅನುದಾನ ಸ್ಥಗಿತಗೊಂಡಿದ್ದು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕರಾಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.