ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ

ಹುಬ್ಬಳ್ಳಿ :ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಿರಿಯಾಲದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ.ಜಿ.ಎಸ್ ದೇವಾಂಗಮಠ ರವರ ಅಧ್ಯಕ್ಷತೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯ ಪ್ರಯುಕ್ತ ಶಾಲೆಯ ಶಿಕ್ಷಕರಿಗೆ ಹಳೆಯ ವಿದ್ಯಾರ್ಥಿ ಸಂಘದ ಕಡೆಯಿಂದ ಸನ್ಮಾನ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಯನ್ನು ಹಳೆಯ ವಿದ್ಯಾರ್ಥಿಯಾದ ಯಲ್ಲಪ್ಪ ಸಾಳುಂಕೆ ತಿಳಿಸಿದರು. ಶಾಲೆಯ ಎಲ್ಲಾ ಶಿಕ್ಷಕರಿಗೆ ಸನ್ಮಾನವನ್ನು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಠ್ಠಲ ಸುಡಕೇನವರ ,ಕೃಷ್ಣ ಪಾಟೀಲ, ಮುಸ್ತಾಕ ಲಂಗೋಟಿ,ಅರ್ಜುನ ಬಂಕಾಪೂರ ಹಾಗೂ ಹಳೆಯ ವಿದ್ಯಾರ್ಥಿಗಳು ನೆರವೇರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿ ಸಂಘದ ಸಹಕಾರ ಇರುವುದಾಗಿ ತಿಳಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಸವಿತಾ ಎಸ್ ಜೆ. ಮೇಡಂ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಸನ್ಮಾನಿತರಾದ ಎಸ್ ಆರ್ ಜಡಿ ಸರ್ ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಶ್ರೀಮತಿ ಜೆ.ಬಿ.ಸವದತ್ತಿ ಹಿರಿಯ ಶಿಕ್ಷಕರಾದ ಶ್ರೀಮತಿ ಹರಪನಹಳ್ಳಿ ,ಜಿ.ಎಸ್ .ಕೋರಿ ಜಯಶ್ರೀ ಹಾಗೂ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ.ನಾಗರಾಜ ಪ್ರಚಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ