ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರಿಗೆ ಕಾಯ್ದೆಗಳ ಅರಿವು ಅಗತ್ಯ : ನ್ಯಾ.ಮಂಜುನಾಥನಾಯಕ್

ಶಿವಮೊಗ್ಗ :ಸರ್ಕಾರಗಳು ಜನಹಿತಕ್ಕಾಗಿ ಕಾಲಕಾಲಕ್ಕೆ ರೂಪಿಸಿ ಅನುಷ್ಟಾನಗೊಳಿಸುವ ಕಾಯ್ದೆ-ಕಾನೂನುಗಳ ಸಾಮಾನ್ಯಜ್ಞಾನ ಜನಸಾಮಾನ್ಯರಿಗೆ ಇರಬೇಕಾದುದು ಇಂದಿನ ತುರ್ತು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಹೇಳಿದರು.
ಅವರು ಇಂದು ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ-2012 ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಅನುಷ್ಠಾನದ ಕುರಿತು ಜಿಲ್ಲೆಯ ಎಲ್ಲಾ ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಆರೋಪಿತನಿಗೆ ಶಿಕ್ಷೆ ನೀಡುವುದರಿಂದ ಸಮಾಜದ ಸುಧಾರಣೆಗಿಂತ ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸುವುದರಿಂದ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ. ಈವರೆಗೆ ಅನುಷ್ಟಾನಗೊಂಡ ಕಾಯ್ದೆಗಳು ಸದ್ಭಳಕೆಯಾಗುವಂತೆ ಹಾಗೂ ಅವುಗಳು ಯಾವುದೇ ಅನುಕೂಲಕ್ಕಾಗಿ ದುರುಪಯೋಗವಾಗದಂತೆಯೂ ತಡೆಯುವ ಅವಶ್ಯಕತೆ ಇದೆ ಎಂದರು.
ಕೆಲವು ಸಂದರ್ಭಗಳಲ್ಲಿ ನಮ್ಮ ಸುತ್ತಮುತ್ತಲ ಪರಿಸರ, ಕೌಟುಂಬಿಕ ವಾತಾವರಣವೂ ಸಹ ಪೊಕ್ಸೋ ಪ್ರಕರಣಕ್ಕೆ ಕಾರಣವಾಗಿರಬಹುದು. ಸ್ನೇಹ-ಸಂಬಂಧಗಳು ಅದರ ಎಲ್ಲೆ ಮೀರದಂತಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು. ಈ ಮಹತ್ವದ ಕಾಯ್ದೆಗಳ ತರಬೇತಿ ಪಡೆದ ಶಿಕ್ಷಕರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಗೊಳಪಡುವ ಸಾರ್ವಜನಿಕರೊಂದಿಗೆ ಈ ಕಾಯ್ದೆಗಳ ಕುರಿತು ಮಾಹಿತಿ ನೀಡಬೇಕು. ವಿಶೇಷವಾಗಿ ವಿದ್ಯಾರ್ಥಿ ವಲಯದಲ್ಲಿ ಈ ಕಾಯ್ದೆಗಳ ಅರಿವು ಮೂಡಿಸುವ ಅಗತ್ಯವಿದೆ ಎಂದವರು ನುಡಿದರು.
ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು, ಮಹಿಳೆಯರು ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ. ಜವಾಬ್ದಾರಿಯುತ ಅಧಿಕಾರಿಗಳು ಇರುವ ಕಾನೂನುಗಳ ವ್ಯವಸ್ಥಿತ ಅನುಷ್ಠಾನದಿಂದ ಪ್ರಕರಣಗಳ ದಾಖಲಾತಿಯಲ್ಲಿ ನಿಯಂತ್ರಣ ಸಾಧ್ಯವಾಗಲಿದೆ. ಬಾಲ್ಯವಿವಾಹ ಇಂದಿಗೂ ಪ್ರಚಲಿತದಲ್ಲಿರುವುದು ಸಾಮಾಜಿಕ ದುರಂತ ಎಂದವರು ನುಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಸಂತೋಷ್ ಎಂ.ಎಸ್., ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬುದ್ದಿಜೀವಿಗಳ ಪ್ರದೇಶ ಎಂದೇ ಖ್ಯಾತವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿಯೂ ಫೋಕ್ಸೋ ಮತ್ತು ಬಾಲ್ಯವಿವಾಹದಂತಹ ಪ್ರಕರಣಗಳು ಮತ್ತೆ ಮತ್ತೆ ದಾಖಲಾಗುತ್ತಿರುವುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಇವುಗಳ ನಿಯಂತ್ರಣಕ್ಕಾಗಿ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸುವ ಅಧಿಕಾರಿ-ನೌಕರರು ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಮನವಿ ಮಾಡಿದ ಅವರು, ಸಮಾಜ ಸುಧಾರಣೆಯೇ ಕಾನೂನಿನ ಅಂತಿಮ ಉದ್ಧೇಶವಾಗಿದೆ ಎಂದರು.ಕಾಯ್ದೆಯ ಬಗ್ಗೆ ಅರಿವು ಹೊಂದಿರುವ ಶಿಕ್ಷಕರು-ಉಪನ್ಯಾಸಕರು ಕಾನೂನುಗಳ ಕುರಿತು ಸಾರ್ವಜನಿಕರಿಗೆ ನೀಡುವ ಮಾಹಿತಿ ಎಚ್ಚರಿಕೆಯ ಘಂಟೆಯಾಗಬೇಕು. ಆ ನಿಟ್ಟನಿಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ಸಮುದಾಯಕ್ಕೆ ಉತ್ತಮ ಮಾರ್ಗದರ್ಶಕರಾಗಬೇಕೆಂದ ಅವರು, ಸಾರ್ವಜನಿಕರು-ಅಧಿಕಾರಿಗಳ ಉತ್ತಮ ಬಾಂಧವ್ಯ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.
ಕಾರ್ಯಾಗಾರದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ಆಹ್ವಾನಿತ ವಿಷಯ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಶಿರೇಖಾ, ಶಾಲಾ ಶಿಕ್ಷಣ ಇಲಾಖೆಯ ಶ್ರೀಮತಿ ನಾಗರತ್ನಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ