ಶಿವಮೊಗ್ಗ :ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ ಮೆಂಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ,
ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ