ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹನೂರು ತಾಲೂಕಿನ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ  ಕ್ರೀಡಾಕೂಟದಲ್ಲಿ ಭಾಗವಹಿಸಿ ಕೋಟಿ ಬೆಳಗುವುದ ಮೂಲಕ ಚಾಲನೆ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಭಾಗವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಹನೂರು ತಾಲೂಕು ಕ್ರೀಡಾಂಗಣವನ್ನು ಇನ್ನೂ ಉನ್ನತ ಮಟ್ಟಕ್ಕೆ ಏರಿಸಲು ಸಂಬಂಧಪಟ್ಟವರ ಜೊತೆ ಚರ್ಚೆ ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಇದನ್ನು ಮಾಡಲಾಗುವುದು ಎಂದರು ನಂತರ ನಮ್ಮ ಹನೂರು ಕ್ಷೇತ್ರದ ಕ್ರೀಡಾಪಟುಗಳು ಜಿಲ್ಲೆಯಿಂದ ರಾಜ್ಯ ಮತ್ತು ರಾಷ್ಟ್ರೀಯ ಅಂತರಾಷ್ಟ್ರೀಯಗಳಲ್ಲಿ ಪ್ರತಿನಿಧಿಸಬೇಕು ಇದಕ್ಕೆ ದೈಹಿಕ ಶಿಕ್ಷಕರು ಹಾಗೂ ಜನಪ್ರತಿನಿಧಿಗಳ ಸಹಕಾರ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾಗಿರುತ್ತದೆ ನಾನು ಸಹ ಮುಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡಿ ಕ್ರೀಡಾಪಟುಗಳಿಗೆ ಉತ್ತೇಜನ ತುಂಬುವ ಕಾರ್ಯ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ ತಾಲ್ಲೂಕು ದೈಹಿಕ ಪರಿವೀಕ್ಷಕರಾದ ಮಹಾದೇವ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸುರೇಶ್ ನಾಯ್ಡು,ಹನೂರು ಪಟ್ಟಣ ಪಂಚಾಯತಿ  ಅಧ್ಯಕ್ಷ ರಾದ ಮುಮ್ತಾಜ್ ಬಾನು,ಉಪಾಧ್ಯಕ್ಷರಾದ ಆನಂದ್ ಕುಮಾರ್ , ಸದಸ್ಯರುಗಳಾದ ಪವಿತ್ರ ಪ್ರಸನ್ನ,ಮಹೇಶ್ ಕುಮಾರ್, ನಾಯ್ಡು,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ