ಪಾವಗಡ : ಪಟ್ಟಣದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣವೆಂದು ತಹಶೀಲ್ದಾರ್ ಡಿ.ಎನ್ ವರದರಾಜು ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳು,ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ರೆಡ್ ಕ್ರಾಸ್, ಎನ್,ಸಿ,ಸಿ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.
ಈ ವೇಳೆ ತಾ.ಪಂ ಕಾರ್ಯನಿರ್ವಣಾಧಿಕಾರಿ ಜಾನಕೀ ರಾಮ್,ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಕೃಷಿ ಅಧಿಕಾರಿ ಅಜಯ್ ಕುಮಾರ್, ಅರಣ್ಯ ಇಲಾಖೆ ಬಸವರಾಜು,ಸಿ.ಡಿ.ಪಿ.ಒ ಸುನಿತಾ, ಕೃಷಿ ಮಾರುಕಟ್ಟೆ ಅಧಿಕಾರಿ ನಾಂಗೇದ್ರ, ಸಂಘ ಸಂಸ್ಥೆಗಳ ಮುಖಂಡರಾದ ಸಿ.ಕೆ. ತಿಪ್ಪೇಸ್ವಾಮಿ,ಕೃಷ್ಣ ಮೂರ್ತಿ, ಪೆದ್ದನ್ನ, ಪಾಳೇಗಾರ ಲೋಕೇಶ್, ನಾಗರಾಜ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ವರದಿ ಪಾವಗಡ.ಕೆ. ಮಾರುತಿ ಮುರಳಿ