ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ವತಿಯಿಂದ ಕರುಣೇಶ್ವರ ನಗರದಲ್ಲಿನ
ಕೆಇಬಿ ಭವನದಲ್ಲಿ ಸೆ.15ರಂದು ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷರಾದ ಸಂಗನಗೌಡ ಪಾಟೀಲ್ ಕಲ್ಲೂರ ತಿಳಿಸಿದರು. ಕಳೆದ ಹಲವು ವರ್ಷದಿಂದ ಪ್ರತಿಭಾ ಪುರಸ್ಕಾರವನ್ನು ಮಾಡುತ್ತಾ ಬಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸಕ್ತ ವರ್ಷವೂ ಎಸ್ಸೆಸ್ಸೆಲ್ಸಿಯಲ್ಲಿ ಶೇ.85ಕ್ಕಿಂತ ಹೆಚ್ಚು, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಹಾಗೂ ನೌಕರರ ಸಂಘದ ಸದಸ್ಯರಾಗಿದ್ದ, ನಿವೃತ್ತ ನೌಕರರನ್ನು ಗೌರವ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದಿಂದ ಬೇರೆ ಸಮಾಜದ ಐವರು(೫) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಡಾ.ಜಯಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶ್ರೀ ಶಂಕರಾನಂದ ಸ್ವಾಮೀಜಿ, ಶ್ರೀ ಪ್ರಭುಲಿಂಗ ದೇವರು ಉದ್ಘಾಟಿಸಲಿದ್ದಾರೆ. ಐಎಎಸ್ ಅಧಿಕಾರಿ ಕವಿತಾ ಮನ್ನಿಕೇರಿ ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ. ಸಂಗನಗೌಡ ಪಾಟೀಲ್ ಕಲ್ಲೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಎಂ.ಡಿ.ಪಾಟೀಲ್, ಮಲ್ಲಿಕಾರ್ಜುನ ತೊದಲಬಾವಿ ಭಾಗವಹಿಸಲಿದ್ದಾರೆ. ಕೇಂದ್ರೀಯ ವಿಶ್ವವಿದ್ಯಾಲಯ ಕುಲಸಚಿವ ಡಾ.ಆರ್.ಆರ್ .ಬಿರಾದಾರ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಸುನೀಲ ಬಾವಿಕಟ್ಟಿ ಉಪನ್ಯಾಸ ನೀಡಲಿದ್ದಾರೆ. ಶರಣು ಬಿಲ್ಲಾಡ, ದೇವಿಂದ್ರ ಬಿರಾದಾರ ಉಪಸ್ಥಿತರಿರಲಿದ್ದಾರೆ ಎಂದರು.
ಪ್ರಮುಖರಾದ ಶಂಕರಲಿಂಗ ಕಲಶೆಟ್ಟಿ, ಲಿಂಗನಗೌಡ ಪಾಟೀಲ್, ಅನೀಲ ಪಾಟೀಲ್, ಸಿದ್ದಣ್ಣ ಸಜ್ಜನ್, ಚಂದ್ರಶೇಖರ ಪಾಟೀಲ್ , ಮಲ್ಲಿಕಾರ್ಜುನ ಬಂಗಾರಿ,ದೇವಿಂದ್ರ ಬಿರಾದಾರ, ಶಾಂತು ಪಾಟೀಲ್,ಸುರೇಶ ಪಾಟೀಲ್, ಸಿದ್ದಣಗೌಡ ಪಾಟೀಲ್ ಹಾಗೂ ಇತರರಿದ್ದರು.
ವರದಿ: ಚಂದ್ರಶೇಖರ ಪಾಟೀಲ್ ಗುಡೂರ ಎಸ್ ಎನ್