ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ಸ್ಥಾಪನೆಗೆ ಒತ್ತಾಯ

ಕಲಬುರಗಿಯಲ್ಲಿ ಮಂಗಳವಾರ ಜರುಗುವ ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರು ಆಗಮಿಸುವ ಹಿನ್ನೆಲೆಯಲ್ಲಿ ಶಿಷ್ಠಾಚಾರದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು ಮತ್ತು
ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ಮೂಲಕ ಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಕ್ಷೌರಿಕ ಸಂಘದ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ರಾಜ್ಯದಲ್ಲಿ 14 ರಿಂದ 15 ಲಕ್ಷ ಹಡಪದ ಅಪ್ಪಣ್ಣ ಸಮುದಾಯದ ಜನಸಂಖ್ಯೆಯಲ್ಲಿ ಈ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕ್ರತಿಕ, ಔದ್ಯೋಗಿಕ, ರಾಜಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿದೆ.
ಬಡತನದಲ್ಲಿ ಕಷ್ಟಕರ ಜೀವನ ಸಾಗಿಸುತ್ತಿರುವ ಶೋಷಿತ ಸಮಾಜವಾಗಿದೆ. ಕಳೆದ ಹಲವಾರು ವರ್ಷಗಳಿಂದ ಹಡಪದ ಅಪ್ಪಣ್ಣ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಹೋರಾಟ ನಡೆಸಲಾಗುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರ ಹಡಪದ ಅಪ್ಪಣ್ಣ ಸಮಾಜ ಸೇರಿ ೧೩ ಜಾತಿಗಳನ್ನೊಳಗೊಂಡ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದರು. ಇದುವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಸಮುದಾಯವನ್ನು ಮತ ಬ್ಯಾಂಕ್‌ಗಳಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಗಳೂ ಸಹ ಸಮುದಾಯದ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.ಈ ಹಿನ್ನೆಲೆಯಲ್ಲಿ ಹಡಪದ ಅಪ್ಪಣ್ಣ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು 100 ಕೋಟಿ ರೂ ನಿಗಮಕ್ಕೆ ಮೀಸಲಿಡಲು ಮತ್ತು ಕಲಬುರಗಿ ಜಿಲ್ಲೆಯ ವಿಶ್ವವಿದ್ಯಾಲಯ ದಲ್ಲಿ ಇರುವ ಶರಣ ಹಡಪದ ಅಪ್ಪಣ್ಣನವರ ಅಧ್ಯಯನ ಪೀಠದ ಪ್ರತ್ಯೇಕ ಕಟ್ಟಡಕ್ಕೆ 10. ಕೋಟಿ ರೂ ಮೀಸಲಿಡಿ, ಹಾಗೇಯೇ ಹಡಪದ ಅಪ್ಪಣ್ಣ ಸಮಾಜಕ್ಕೆ ಎಸ್ಸಿ ಅಥವಾ ಎಸ್ಟಿಗೇ ಸೇರ್ಪಡೆ ಮಾಡಲು ಅವಕಾಶ ಮಾಡಿ ಕೊಡಿ ಮತ್ತು ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿರುವ ಮಸಬಿನಾಳ ಗ್ರಾಮದಲ್ಲಿ ಶರಣ ಹಡಪದ ಅಪ್ಪಣ್ಣ ನವರ ಜನ್ಮಸ್ಥಳ ಮತ್ತು ಹಡಪದ ಲಿಂಗಮ್ಮ ನವರ ಜನ್ಮಸ್ಥಳ ದೇಗಿನಾಳ ಗ್ರಾಮವನ್ನು ಕೂಡಲಸಂಗಮ ಪ್ರಾಧಿಕಾರಕ್ಕೆ ಸೇರಿಸಬೇಕು ಮತ್ತು ಬಸವಕಲ್ಯಾಣ ದಲ್ಲಿ ಇವರು ಬಸವಣ್ಣನವರ ಅರಿವಿನ ಮನೆ (ಗವಿಯ) ಪಕ್ಕದಲ್ಲಿ ಇರುವ ಶರಣ ಹಡಪದ ಅಪ್ಪಣ್ಣ ನವರ ಅರಿವಿನ ಮನೆ( ಗವಿಯಲ್ಲಿ ) ಬೀದರ್ ಜಿಲ್ಲಾಧಿಕಾರಿ ಮತ್ತು ಬಸವಕಲ್ಯಾಣ ತಾಲೂಕು ಅಧಿಕಾರಿಗಳು ಹಾಕಿದ ನಾಮಫಲಕವನ್ನು ಕೀಡಿಗೆಡಿಗಳು ನಾಮಫಲಕ ಕಿತ್ತು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಅಧಿಕಾರಿಗಳು ಈ ವಿಷಯದಲ್ಲಿ ಮುತುರ್ವಜಿ ವಹಿಸಿ ನಾಮಫಲಕವನ್ನು ಮತ್ತೆ ಹಾಕಿ ಈ ಗವಿಯ ಅಭಿವೃದ್ಧಿ ಪಡಿಸಲು ಸರ್ಕಾರ ಬಿ ಕೆ ಡಿ ಬಿ ಗೇ ಸೇರ್ಪಡೆ ಮಾಡುವ ಮೂಲಕ ಬಸವಾದಿ ಶರಣ ಹಡಪದಅಪ್ಪಣ್ಣ ನವರ ಹಾಗೂ ಹಡಪದ ಲಿಂಗಮ್ಮ ನವರ ಜನ್ಮ ಸ್ಥಳವನ್ನು ಪ್ರೇಕ್ಷಣೀಯ ಸ್ಥಳಗಳಾಗಿ ರೂಪುಗೊಳ್ಳಿಸಬೇಕು ಹಾಗೆಯೆ ನಮ್ಮ ಹಡಪದ ಅಪ್ಪಣ್ಣ ಕ್ಷೌರಿಕ ವೃತ್ತಿಯನ್ನು ಮಾಡುವ ಕಾಯಕ ಬಂಧುಗಳಿಗೆ ಆರೋಗ್ಯದ ಹಿತ ದೃಷ್ಟಿಯಿಂದ ಎಲ್ಲಾ ಖಾಸಗಿ ಮತ್ತು ಸರ್ಕಾರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆರೋಗ್ಯ ಕಾಡ್೯ ಕ್ಷೌರಿಕ ಸಮಾಜಕ್ಕೆ ನೀಡುವುದರ ಮೂಲಕ ಇದೇ ಸೆ.17 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಮತ್ತು 17ರಂದು ಕಲಬುರಗಿಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಮ್ಮ ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರಾತಿನಿಧ್ಯ ಸಿಗಲಿ ರಾಜ್ಯದ ಅನೇಕ ಸಚಿವರಿಗೆ ಶಾಸಕರಿಗೆ ಮನವಿ ನಮ್ಮ ಹಡಪದ ಅಪ್ಪಣ್ಣ ಸಮಾಜದ ಬಗ್ಗೆ ಗಮನ ಹರಿಸಿ ಈ ಸಮುದಾಯದ ಬಹು ದಿನಗಳ ಬೇಡಿಕೆಯನ್ನು ಪೂರೈಸಲು ತಮ್ಮಲ್ಲಿ ಮನವಿ.
ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್. ಜಿಲ್ಲಾಧ್ಯಕ್ಷರ ಈರಣ್ಣ ಸಿ ಹಡಪದ ಸಣ್ಣೂರ. ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ ಹಡಪದ ಶಿಕ್ಷಕರು ಕಿರಣಗಿ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನೀಲೂರ ಜಿಲ್ಲಾ ಉಪಾಧ್ಯಕ್ಷ ರುದ್ರಮಣಿ ಅಪ್ಪಣ ಬಟಗೇರಾ. ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್. ಹಾಗೂ ಜಿಲ್ಲಾ ಸಹ ಕಾರ್ಯದರ್ಶಿ ನಿಂಗಣ್ಣ ಯಾತನೂರ, ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಬಗದುರಿ.ಸೇರಿದಂತೆ ಪದಾಧಿಕಾರಿಗಳು ಮತ್ತು ಇತರರು ಇದ್ದರು. ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒತ್ತಾಯ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತಂದು 100.ಕೋಟಿ ರೊ ನೀಡುವುದರ ಮೂಲಕ ಈ ಸಮಾಜದ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಇದೇ ಸೆಪ್ಟೆಂಬರ್ 17 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಾಯಕ ಬೇಡಿಕೆಯನ್ನು ಈಡೇರಿಸಿ ಈ ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ