ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.
ದಲಿತ ವ್ಯಕ್ತಿಗೆ ಜಾತಿನಿಂದನೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಸಹ ಹಾಕಿದ್ದಾರೆ ಇದರಿಂದ ಪರಿಶಿಷ್ಟ ಜಾತಿಯ ಸಮುದಾಯದವರ ಮನಸಿಗೆ ತುಂಬಾ ಬೇಸರ ಉಂಟು ಮಾಡಿದೆ ಎಂದು ಪ್ರಗತಿ ಪರ ಸಂಘಟನೆಯವರು ಹಾಗೂ ದಲಿತ ಮುಖಂಡರು ದೂರು ನೀಡಿ ಶಾಸಕ ಮುನಿರತ್ನ ರವರಿಗೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ತಕ್ಕ ಶಿಕ್ಷೆ ಆಗಬೇಕು ಎಂದು ಗುಂಡ್ಲುಪೇಟೆ ಠಾಣೆಯಲ್ಲಿ ದೂರನ್ನು ನೀಡಲಾಗಿದೆ.
ವರದಿ ಗುಂಡ್ಲುಪೇಟೆ ಕುಮಾರ್



















