ಇಂಡಿ:ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ವಿಜಯಪುರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಹಾಗೂ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಲೋಣಿ(ಕೆಡಿ) ಇವರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಲಚ್ಯಾಣ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹೊಸ ಪಡನೂರ ವಿದ್ಯಾರ್ಥಿಗಳಾದ ಗಣೇಶ ಅವರಾದಿ 600 ಮೀಟರ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು,ಉಮರ ಮಕಾನದಾರ 100 ಮೀಟರ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು,ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ,ಬಾಲಕರು ಖೋ ಖೋ ಕ್ರೀಡೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಸಾಧನೆಗಾಗಿ ಶಾಸಕರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಷಡಕ್ಷರಿ ಮೇತ್ರಿ ಹಾಗೂ ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಭೀಮಾಶಂಕರ ಭೈರಜಿ ಉಪಾಧ್ಯಕ್ಷರಾದ ಶ್ರೀಮತಿ ಕವಿತಾ ಅವರಾದಿ ಹಾಗೂ ಸರ್ವ ಸದಸ್ಯರು,ಮುಖ್ಯ ಗುರುಗಳಾದ ಶ್ರೀ ಕೆ.ಆಯ್.ಉಮರಾಣಿ,ಎನ್.ಕೆ.ಸಕ್ಕರಶೆಟ್ಟಿ,ಎಸ್.ಬಿ.ಪಾಟೀಲ,ಸಿ.ಎಸ್.ಮೋಟಗಿ, ಸಿ.ಡಿ.ಮಠಪತಿ,ಪಿ.ಬಿ.ಹಂಚನಾಳ,ಆರ್.ಡಿ.ಕಪಾಲಿ ಹಾಗೂ ಸಮಸ್ತ ಅಡುಗೆ ಸಿಬ್ಬಂದಿಯವರು,ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಎಸ್.ಬಡಚಿ ಹಾಗೂ ವಿದ್ಯಾರ್ಥಿಗಳ ಸಾಧನೆಗಾಗಿ ಸಮಸ್ತ ಊರಿನ ಗುರು ಹಿರಿಯರು ಅಭಿನಂದಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.