ಪಾವಗಡ :ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿ ಡಿ ಪಿ ಓ ಸುನಿತಾ ಡಿಜೆ ತಿಳಿಸಿದರು.ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ರಾಯಚರ್ಲುಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಆರು ತಿಂಗಳು ತುಂಬಿದ ಮಕ್ಕಳಿಗೆ ಪೂರಕ ಆಹಾರವನ್ನು ನೀಡುವ ಬಗ್ಗೆ ಈ ಮಾಸಾಚರಣೆಯಲ್ಲಿ ಮೂಡಿಸಲಾಗುವುದು ಎಂದರು.
0-6 ವರ್ಷದ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕ ಮಟ್ಟವನ್ನು ಸುಧಾರಣೆ ಮಾಡುವುದು ಕಡಿಮೆ ತೂಕದ ಮಕ್ಕಳ ಬಗ್ಗೆ ಗಮನಹರಿಸಿ ಬಾಣಂತಿಯರ ಹಾಗೂ ಮಕ್ಕಳಲ್ಲಿ ರಕ್ತಹೀನತೆಯನ್ನು ತಡೆಗಟ್ಟುವುದು ಈ ಅಭಿಯಾನದ ಮುಖ್ಯ ಗುರಿ ಎಂದು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ವಿಜಯಲಕ್ಷ್ಮಿ ತಿರುಮಣಿ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ರಾಜೇಶ್, ರಾಯಚರ್ಲು ಶಾಲೆಯ ಮುಖ್ಯೋಪಾಧ್ಯಾಯ ಅರುಣ್ ಕುಮಾರ್, ಪೋಷಣ್ ತಾಲ್ಲೂಕು ಸಂಯೋಜಕಿ ಮಂಜುಳಾ ಹಾಗೂ ತಿರುಮಣಿ ವೃತ್ತದ ಎಲ್ಲಾ ಅಂಗನವಾಡಿ, ಆಶಾ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.
ವರದಿ ಪಾವಗಡ.ಕೆ.ಮಾರುತಿ ಮುರಳಿ