ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದ ಸಭಾಂಗಣದಲ್ಲಿ, ಸೆ 18ರಂದು ಜರುಗಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ಗಣಿತ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರವನ್ನು ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರು ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಗಣಿತ ವಿಷಯ ಅತ್ಯಂತ ಮುಖ್ಯವಾದ ವಿಷಯವಾಗಿದೆ, ಆದ್ದರಿಂದ ಶಿಕ್ಷಕರು ಪರಿಣಾಮಕಾರಿಯಾಗಿ ಭೋದನೆ ಮಾಡಾಕಾಗಿದೆ ಎಂದರು. ಈ ಮೂಲಕ ಮಕ್ಕಳ ಕಲಿಗೆ ಹೆಚ್ಚು ಒತ್ತುಕೊಟ್ಟು, ಮಕ್ಕಳಲ್ಲಿ ಗಣಿತ ವಿಷಯ ಕುರಿತು ಕಲಿಕೆಗೆ ಹೆಚ್ಚಿನ ಆಸಕ್ತಿ ಮೂಡಿಸಬೇಕಿದೆ. ಅವರಲ್ಲಿ ಕಠಿಣ ವಿಷಯವಲ್ಲ ಎಂಬುದನ್ನು ಮನದಟ್ಟು ಮಾಡಿ, ಅವರಲ್ಲಿನ ಗಣಿತ ಕಬ್ಬಿಣದ ಕಡಲೆ ಎಂಬ ಭಯವನ್ನು ಹೋಗಲಾಡಿಸಬೇಕಿದೆ ಎಂದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಗಣಿತ ಶಿಕ್ಷಕರು ಪರಿಣಾಮಕಾರಿಯಾಗಿ ಭೋದನೆ ಮಾಡಬೇಕಿದೆ, ಅಂದಾಗ ಮಾತ್ರ ಮಕ್ಕಳಿಗೆ ಕಲಿಕೆಗೆ ಕಠಿಣವಾಗುವುದಿಲ್ಲ. ಶಿಕ್ಷಕರು ಕಲಿಸುವ ವಿಷಯ ಯಾವುದೇ ಆಗಿರಲಿ ಆ ವಿಷಯಕ್ಕೆ ಅನುಗುಣವಾಗಿ, ಶಿಕ್ಷಕರು ಸೂಕ್ತ ರೀತಿಯಲ್ಲಿ ಪೂರ್ವ ತಯಾರಿ ಮಾಡಿಕೊಳ್ಳಬೇಕಿದೆ. ಎಲ್ಲಾ ಮಕ್ಕಳಿಗೆ ಪಠ್ಯಕ್ರಮವನ್ನು ಅನುಸರಿಸಿ, ಪರಿಣಾಮಕಾರಿ ಬೋಧನೆ ಮಾಡಿ ಎಂದು ಶಿಕ್ಷಕರಿಗೆ ಸೂಚಿಸಿದರು. ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿಯವರು, ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ, ಕಾವಲಿ ಶಿವಪ್ಪನಾಯಕ. ಪಟ್ಟಣ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ, ಸೈಯದ್ ಶುಕೂರ್ ಅಹಮದ್, ಮತ್ತು ವಿವಿದ ಜನಪ್ರತಿನಿಧಿಗಳು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ, ಪದ್ಮನಾಭ ಕರ್ಣಂ. ಶಿಕ್ಷಣ ಇಲಾಖೆಯ ವಿವಿದ ಅಧಿಕಾರಿಗಳು, ಹಾಗೂ ವಿವಿದ ಗಣ್ಯರು ವೇದಿಕೆಯಲ್ಲಿದ್ದರು. ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕಿನ ಪ್ರೌಢಶಾಲೆಗಳ, ಗಣಿತ ಶಿಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.