ಗಂಗಾವತಿ : ಸೆಪ್ಟೆಂಬರ್- 20 ರಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಜನ ಸಂಗ್ರಾಮ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ ಲಕ್ಷ್ಮೀಪತಿ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ದೇವರಾಜ್ ಜಂತಕಲ್ ಇವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸರ್ವ ಸದಸ್ಯರ ಸಭೆ ನಡೆಯಿತು.ಈ ಸಭೆಯಲ್ಲಿ ವೇದಿಕೆಯ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ಬಸವರಾಜ ಈಳಿಗನೂರು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಸವರಾಜ ಈಳಿಗನೂರು ಅವರಿಗೆ ಆದೇಶ ಪತ್ರ ನೀಡಿ ಜಿಲ್ಲೆಯ ಉಳಿದ ಪದಾಧಿಕಾರಿಗಳು ಹಾಗೂ ತಾಲೂಕಾ ಘಟಕಗಳ ಪದಾಧಿಕಾರಿಗಳ ಆಯ್ಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ಜನ ಸಂಗ್ರಾಮ ವೇದಿಕೆಯನ್ನು ಬಲಪಡಿಸುವಂತೆ ತಿಳಿಸಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.